ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟಿ ಕಿಶೋರಿ ಬಲ್ಲಾಳ್ ನಿಧನ
ಕನ್ನಡದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಅವರು ಇಂದು ವಿಧಿವಶರಾಗಿದ್ದಾರೆ ಇತ್ತೀಚೆಗೆ ಬಿದ್ದು ಪೆಟ್ಟು ಮಾಡಿಕೊಂಡಿದ್ದ ಅವರಿಗೆ ವಯೋಸಜಯ ಕಾಯಿಲೆಗಳೂ ಇದ್ದವು. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು. ಜಯನಗರದ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
70ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಕಿಶೋರಿ ಬಲ್ಲಾಳ್ ತಮ್ಮ ವೃತ್ತಿ ಜೀವನದಲ್ಲಿ ಹೆಸರಾಂತ ನಿರ್ದೇಶಕರು ಮತ್ತು ನಟರ ಜೊತೆಗೆ ಕೆಲಸ ಮಾಡಿದ್ದಾರೆ. ಕಿಶೋರಿಯವರು ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಜನಿಸಿದರು. ಮುಂದೆ 1950ರಲ್ಲಿ ಭರತನಾಟ್ಯ ಕಲಾವಿದ ರಂಗಕರ್ಮಿ, ಶ್ರೀಪತಿ ಬಲ್ಲಾಳರ ಜೊತೆ ಮದುವೆಯಾದರು. ಶ್ರೀಪತಿ ಬಲ್ಲಾಳ್ ಅವರು ಈ ಹಿಂದೆಯೇ ನಿಧನರಾಗಿದ್ದರು. ಮಗ ಕೂಡ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಆತನ ಪತ್ನಿ ಅಹಲ್ಯ ಬಲ್ಲಾಳ್ ಕೂಡ ನಟಿ ಎನ್ನಲಾಗಿದೆ.
Comments