ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
44 ವರ್ಷದ ಬುಲೆಟ್ ಪ್ರಕಾಶ್ ಅವರು ಬಹುಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಐದು ದಿನಗಳಿಂದ ಕನ್ನಿಂಗ್ ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ವೈದ್ಯ ಡಾ. ತೇಜಸ್ವಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. "ಗ್ಯಾಸ್ಟಿಕ್ ಸಮಸ್ಯೆಯ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ ಅವರಿಗೆ ಲಿವರ್ ಹಾಗೂ ಕಿಡ್ನಿ ಸಮಸ್ಯೆ ಕಾಣಿಸಿದ್ದು ವೆಂಟಿಲೇಟರ್ ಮೂಲಕ ಉಸಿರಾಟ ನಡೆಸಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿದೆ.
ಇದುವರೆಗೂ 300ಕ್ಕೂ ಅಧಿಕ ಕನ್ನಡ ಸಿನೇಮಾಗಳಲ್ಲಿ ಅಭಿನಯಿಸಿರುವ ಬುಲೆಟ್ ಪ್ರಕಾಶ್ ಅವರು ತಮ್ಮ ವಿಶಿಷ್ಟ ದೇಹ ಮತ್ತು ಮ್ಯಾನರಿಸಂ ಮೂಲಕ ಚಿತ್ರರಸಿಕರ ಮನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಸಾಧು ಕೋಕಿಲ ಹಾಗೂ ಬುಲೆಟ್ ಪ್ರಕಾಶ್ ಕಾಮಿಡಿ ಕಾಂಬಿನೇಷನ್ ಹಲವು ಕನ್ನಡ ಚಿತ್ರಗಳಲ್ಲಿ ಪ್ರೇಕ್ಷಕರಿಗೆ ಮನರಂಜನೆ ನೀಡುವಲ್ಲಿ ಯಶಸ್ವಿಯಾಗಿತ್ತು.
Comments