ಪುಲ್ವಾಮಾ ಎನ್ಕೌಂಟರ್ಗೆ ಮೂವರು ಉಗ್ರರು ಬಲಿ

03 Jun 2020 12:16 PM | Crime
376 Report

ಬುಧವಾರ ಬೆಳಗ್ಗೆ ಕಂಗನ್ ಪ್ರದೇಶದಲ್ಲಿ ಭದ್ರತಾ ಪಡೆ ಕಾರ್ಯಾಚರಣೆಯನ್ನು ನಡೆಸಿತ್ತು. ಈ ಸಂದರ್ಭದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿದೆ.

ಮೃತರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.ಮಂಗಳವಾರ ಜೈಷ್ ಎ ಮೊಹಮ್ಮದ್ ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಅವರಿಂದಲೂ ಪಿಸ್ತೂಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪುಲ್ವಾಮಾ ಎನ್‌ಕೌಂಟರ್ ವೇಳೆಯಲ್ಲಿ ಪ್ರದೇಶದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಕಡಿತಗೊಳಿಸಲಾಗಿತ್ತು. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.

 

Edited By

venki swamy

Reported By

venki swamy

Comments