ಜಮ್ಮುಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಎನ್ಕೌಂಟರ್ : ನಾಲ್ವರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ ಕೌಂಟರ್ ಗಳು ಮುಂದುವರಿಯುತ್ತಿದ್ದು ಶನಿವಾರ ಬೆಳಗ್ಗೆ 4 ಉಗ್ರರನ್ನು ಹತ್ಯೆಗೈಯುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.
ಉಗ್ರರ ಇರುವಿಕೆಯ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ನಿಪೋರಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದೆ. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪ್ರತಿ ದಾಳಿ ನಡೆಸಿದ ಯೋಧರು, ಉಗ್ರರನ್ನು ಹತ್ಯೆಗೈದಿದ್ದಾರೆ, ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ವರ್ಷದ ಇದುವರೆಗಿನ 36 ಕಾರ್ಯಾಚರಣೆಗಳಲ್ಲಿ ಒಟ್ಟು 88 ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಕೆಡವಿ ಹಾಕಿದೆ ಎಂದು ಜಮ್ಮು ಕಾಶ್ಮೀರದ ಡಿಜಿಪಿ ಆಗಿರುವ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದಾರೆ.
Comments