ಸರ್ಕಾರಿ ಗೌರವಗಳೊಂದಿಗೆ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಕ್ರಿಯೆ

ನಗರದ ಹೊರವಲಯ ಪೋತ್ಗಲ್ ಸಮೀಪ ಸಕಲ ಸರ್ಕಾರಿ ಗೌರವದೊಂದಿಗೆ ಹಾಗೂ ಅಂತರ ಕಾಪಾಡಿಕೊಂಡು ಮಾರ್ಗಸೂಚಿ ಅನುಸಾರ ಕೋವಿಡ್ನಿಂದ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅವರ ಅಂತ್ಯಸಂಸ್ಕಾರವನ್ನು ಜಿಲ್ಲಾಡಳಿತದಿಂದ ಅಂತ್ಯಕ್ರಿಯೆ ನಡೆಸಲಾಯಿತು.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಶೋಕ್ ಗಸ್ತಿ ಅವರು ನಿನ್ನೆ ರಾತ್ರಿ 10.30ರ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥಿವ ಶರೀರವನ್ನು ಅಂಬ್ಯುಲೆನ್ಸ್ ಮೂಲಕ ನಗರಕ್ಕೆ ತರಲಾಗಿತ್ತು. ನಗರದ ಆರ್.ಟಿ.ಓ ವೃತ್ತದಲ್ಲಿ ಕೆಲ ಕ್ಷಣ ವಾಹನ ನಿಲ್ಲಿಸಿ ಅವರ ಅಭಿಮಾನಿಗಳು ಹಾಗೂ ಸಮಾಜದವರಿಂದ ಸಂತಾಪ ಸೂಚಿಸಿದರು. ನಂತರ ನೇರವಾಗಿ ಅವರ ಪಾರ್ಥಿವ ಶರೀರವು ತಾಲೂಕಿನ ಪೋತಗಲ್ ಗ್ರಾಮದಲ್ಲಿ ಕೋವಿಡ್ ನಿಯಮಗಳ ಪ್ರಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
Comments