ಸಿಂಘು ಗಡಿಯಲ್ಲಿ ಮತ್ತೆ ಉದ್ವಿಘ್ನ ಪರಿಸ್ಥಿತಿ: ಪೊಲೀಸರಿಂದ ಆಶ್ರುವಾಯು ಪ್ರಯೋಗ
ದೆಹಲಿಯ ಸಿಂಘು ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರು ಎಂದು ಹೇಳಿಕೊಳ್ಳುವ ಜನರು ಹಾಗೂ ಪ್ರತಿಭಟನಾ ನಿರತ ರೈತರ ಮಧ್ಯೆ ಗಲಾಟೆ ನಡೆದಿದೆ.
ರೈತರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಸಿಂಗು ಗಡಿಯಲ್ಲಿ ಸ್ಥಳೀಯರು ಮತ್ತು ರೈತರ ನಡುವೆ ಕಲ್ಲುತೂರಾಟ ನಡೆದಿದ್ದು, ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಷೆಲ್ ಗಳನ್ನು ಪ್ರಯೋಗಿಸಿದ್ದಾರೆ.
ಗಣರಾಜ್ಯೋತ್ಸವ ದಿನದಂದು ನಡೆಸಲಾದ ಟ್ರ್ಯಾಕ್ಟರ್ ಜಾಥಾದಲ್ಲಿ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ದೆಹಲಿ ಹರಿಯಾಣದ ಸಿಂಘು ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
Comments