ಕಡೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ರಮೇಶ್ ಜಾರಕಿಹೊಳಿ

ಸಿಡಿ ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಆರೋಪದಿಂದ ಮುಕ್ತರಾಗಿ ಬಂದಮೇಲೆ ಸಚಿವ ಸ್ಥಾನ ನೀಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸೆಕ್ಸ್ ಸಿಡಿ ಬಯಲಿಗೆ ಬಂದ ಬೆನ್ನಲ್ಲೇ ಅಜ್ಞಾತ ಸ್ಖಳಕ್ಕೆ ಹೋಗಿರುವ ರಮೇಶ್ ಜಾರಕಿಹೊಳಿ ಅವರು, ಇಂದು ಸಾಕಷ್ಟು ಚರ್ಚೆಗಳು ರಾಜಕೀಯ ಪ್ರಹಸನದ ಬಳಿಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುತ್ತಿರುವುದಾಗಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಯುವತಿಯೊಬ್ಬರಿಗೆ ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಕೆ ಜೊತೆ ಲೈಂಗಿಕ ಸಂಪರ್ಕ ಹೊಂದಿದ್ದಾರೆ. ನಂತರ ತಮ್ಮ ಸಂಬಂಧದ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಕ್ಕೆ ಸಂಬಂಧಿಸಿದ ರಾಸಲೀಲೆಯ ವಿಡಿಯೋವನ್ನು ಬಿಡುಗಡೆಗೊಳಿಸಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
Comments