ಐಸಿಸ್ ಖುರಾಸನ್ ಉಗ್ರ ಸಂಘಟನೆ ಮೇಲೆ ಅಮೆರಿಕದದಿಂದ ಡ್ರೋನ್ ದಾಳಿ

28 Aug 2021 10:04 AM | Crime
1022 Report

ಅಫ್ಘಾನಿಸ್ತಾನ ರಾಜಧಾನಿ ಕಾಬುಲ್ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಅಮೆರಿಕ ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಯುಎಸ್ ಅಧ್ಯಕ್ಷ ಜೋ ಬೈಡೆನ್ ಪ್ರತೀಕಾರದ ಮಾತನಾಗಳನ್ನಾಡಿದ್ದರು. ಇದರ ಬೆನ್ನಲ್ಲೇ ಅಮೆರಿಕ ಸೇನಾ ಪಡೆ ಕಾಬುಲ್ ಏರ್ಪೋರ್ಟ್ ದಾಳಿಯ ಹೊಣೆ ಹೊತ್ತಿರುವ ಐಸಿಸ್ ಉಗ್ರರನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ.

ಆತ್ಮಹುತಿ ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿತ್ತು. ಇದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಉಗ್ರ ಸಂಘಟನೆಗೆ ಖಡಕ್​ ಎಚ್ಚರಿಕೆ ನೀಡಿದ್ದರು. ಅಮೆರಿಕ ವಿರುದ್ಧ ದಾಳಿ ಮಾಡಿದವರು ಎಚ್ಚರಿಕೆಯಿಂದ ಇರಿ. ನಮ್ಮ ವಿರುದ್ಧ ದಾಳಿ ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ನಿಮ್ಮನ್ನು ನಾವು ಎಂದಿಗೂ ಮರೆಯುವುದಿಲ್ಲ. ನೀವು ಎಲ್ಲೇ ಅವಿತಿದ್ದರೂ ಹೆಕ್ಕಿ ಹೆಕ್ಕಿ ಕೊಲ್ಲುತ್ತೇವೆ ಎಂದು ಎಚ್ಚರಿಸಿದ್ದರು. ಗುರುವಾರ, ಕಾಬೂಲ್ ವಿಮಾನ ನಿಲ್ದಾಣದ ಅಬ್ಬೆ ಗೇಟ್‌ನ ಬಳಿ ಆತ್ಮಹತ್ಯಾ ದಾಳಿಕೋರರು ಬಾಂಬ್ ಸ್ಫೋಟಿಸಿದಾಗ 13 ಮಂದಿ ಅಮೆರಿಕದ ಸೈನಿಕರು ಸೇರಿದಂತೆ 78 ಜನರು ಸಾವನ್ನಪ್ಪಿದ್ದರು.

Edited By

venki swamy

Reported By

venki swamy

Comments