ನಟಿ ಪ್ರಿಯಾಂಕಾಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಮುಂಬೈ, ಬಾಲಿವುಡ್,ಹಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಮತ್ತೊಮ್ಮೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನಟಿ ಪ್ರಿಯಾಂಕಾ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಪಾತ್ರರಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ತಾರೆ ಎಂಬ ವರ್ಗಕ್ಕೆ ಪ್ರಿಯಾಂಕಾ ಛೋಪ್ರಾ ಅವರನ್ನು ಆಯ್ಕೆ ಮಾಡಲಾಗಿದೆ.ಇದೇ ಸಂದರ್ಭದಲ್ಲಿ ಮಾತನಾಡಿರುವ ದಾದಾ ಸಾಹೇಬ್ ಫಾಲ್ಕೆ ಅಕಾಡೆಮಿ ಮತ್ತು ಪ್ರಶಸ್ತಿ ಸಮಿತಿ ಅಧ್ಯಕ್ಷ ಗಣೇಶ್ ಜೈನ್, ಪ್ರಿಯಾಂಕಾ ಅವರ ಪ್ರಯತ್ನದ ಫಲವಾಗಿ ಕಠಿಣ ಪರಿಶ್ರಮದ ಮೂಲಕ ಈ ಸ್ಥಾನ ಪ್ರಾಪ್ತವಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಪ್ರಶಸ್ತಿ ಸಮಾರಂಭ ಜೂನ್ ೧ರಂದು ಮುಂಬೈಯಲ್ಲಿ ನಡೆಯಲಿದೆ.
Comments