ಜುಲೈ 30ರಂದು ರಶ್ಮಿಕಾ, ರಕ್ಷಿತ್ ಶೆಟ್ಟಿ ನಿಶ್ಚಿತಾರ್ಥ?
ಬೆಂಗಳೂರು:: ಸ್ಯಾಂಡಲ್ ವುಡ್ ನಟ ರಕ್ಷಿತ್ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಜುಲೈ 3ರಂದು ನಡೆಯಲಿದೆ. ಇತ್ತೀಚೆಗೆ ತೆರೆಕಂಡ ಕಿರಿಕ್ ಪಾರ್ಟಿ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಟಿಸಿದ್ದರು, ಈ ಚಿತ್ರದಲ್ಲಿ ಕರ್ಣ ಮತ್ತು ಸಾನ್ವಿ ಪಾತ್ರದಲ್ಲಿ ಮಿಂಚಿದ್ದ ಈ ಜೋಡಿ ಸಿನಿ ಪ್ರಿಯರ ಮನ ಗೆದ್ದಿತ್ತು.
ನಂತರದ ದಿನಗಳಲ್ಲಿ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ನಡುವೆ ಪ್ರೇಮಾಂಕುರವಾಗಿದೆ ಎಂದು ಮಾತುಗಳು ಕೇಳಿ ಬಂದಿದ್ದವು. ಇದೀಗ ಈ ಜೋಡಿ ಜುಲೈ 3 ರಂದು ನಿಶ್ಚಿತಾರ್ಥ ಮಾಡಿಕೊಳ್ಳುವುದು ಖಚಿತವಾಗಿದೆ. ಜುಲೈ 3ರಂದು ವಿರಾಜ್ ಪೇಟೆಯಲ್ಲಿ ನಿಶ್ಚಿತಾರ್ಥ ನಡೆಯಲಿದ್ದು, ಎರಡು ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ಸೆರೆನಿಟಿ ಹಾಲ್ ನಲ್ಲಿ ಸಂಜೆ 6.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Comments