45ನೇ ವಸಂತಕ್ಕೆ ಕಾಲಿಟ್ಟ ಸೌರವ್ ಗಂಗೂಲಿ
ನವ ದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ ಗಂಗೂಲಿ 45ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇವತ್ತು ಅವರು ತಮ್ಮ
ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ನಾಯಕತ್ವದಲ್ಲಿ ಭಾರತದ ಕ್ರಿಕೆಟ್ ತಂಡ 2003ರ ವಿಶ್ವಕಪ್ ನಲ್ಲಿ ಫೈನಲ್
ಪ್ರವೇಶಿಸಿತ್ತು. ಜತೆಗೆ 2000, 2002ರಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡ ಉತ್ತಮ
ಪೈಪೋಟಿ ನೀಡಿತ್ತು.
ಐಸಿಸಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಭಾರತ
ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಯುವರಾಜ್ ಸಿಂಗ್, ಪ್ರಗ್ಯಾನ್ ಓಜಾ ಟ್ವೀಟರ್ ನಲ್ಲಿ ಸೌರವ್ ಗಂಗೂಲಿ ಹುಟ್ಟುಹಬ್ಬಕ್ಕೆ
ಶುಭ ಹಾರೈಸಿದ್ದಾರೆ.
ಸೌರವ್ ಗಂಗೂಲಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ 2003ರ ವಿಶ್ವಕಪ್ ನಲ್ಲಿ ಫೈನಲ್ ಪ್ರವೇಶಿಸಿತ್ತು. ಜತೆಗೆ 2000, 2002ರಲ್ಲಿ
ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡ ಉತ್ತಮ ಪೈಪೋಟಿ ನೀಡಿತ್ತು. ಸದ್ಯ ಸೌರವ್ ಗಂಗೂಲಿ
ಪಶ್ಚಿಮ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲವೊಮ್ಮೆ ಪಂದ್ಯ ವೀಕ್ಷಕ
ವಿವರಣೆಗಾರರಾಗಿಯೂ ಕಾಣಿಸಿಕೊಳ್ಳುತ್ತಾರೆ.
Comments