ನಟ ಅಂಬರೀಷ್ ಆಸ್ಪತ್ರೆಗೆ ದಾಖಲು
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದಾಗಿ ನಟ, ಶಾಸಕ ಅಂಬರೀಶ್ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.ಆಸ್ಪತ್ರೆಯ ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ.
ಎರಡು ದಿನಗಳ ಹಿಂದಷ್ಟೆ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಆರೋಗ್ಯದ ಸಮಸ್ಯೆಯಿದ್ದ ಕಾರಣಕ್ಕೆ ಅಂಬರೀಶ್ ವಿಧಾನಸೌಧಕ್ಕೆ ವ್ಹೀಲ್ ಚೇರ್ ಮೇಲೆ ಆಗಮಿಸಿ ಮತದಾನ ಮಾಡಿದ್ದರು. ೨ ವರ್ಷಗಳ ಹಿಂದಷ್ಟೇ ಸಚಿವರಾಗಿದ್ದ ಸಂದರ್ಭದಲ್ಲಿ ಇದೇ ರೀತಿ ಆರೋಗ್ಯ ಸಮಸ್ಯೆ ಉಂಟಾಗಿ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
Comments