ನಟ ಚೇತನ್ಗೆ ಜೀವ ಬೆದರಿಕೆ: ರಕ್ಷಣೆಗಾಗಿ ಪೊಲೀಸರ ಮೊರೆ

ಬೆಂಗಳೂರು: ಸ್ಯಾಂಡಲ್ವುಡ್ ನಟ ಚೇತನ್ ಅವರು ತಮಗೆ ಜೀವ ಬೆದರಿಕೆ ಇದ್ದು ಸೂಕ್ತ ರಕ್ಷಣೆ ಒದಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಬೆದರಿಕೆ ಸಂದೇಶಗಳನ್ನು ಪ್ರಕಟಿಸುತ್ತಿದ್ದಾರೆ. ಅಲ್ಲದೆ ನನ್ನ ಫೋನ್ ಗೆ ಜೀವ ಬೆದರಿಕೆ ಕರೆಗಳು ಹೆಚ್ಚಾಗಿ ಬರುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ.
ಪ್ರಗತಿಪರ ಚಿಂತನೆ, ವಿಚಾರಧಾರೆ, ಹೋರಾಟ ನಡೆಸುತ್ತಿರುವ ನನಗೂ ಜೀವ ಬೆದರಿಕೆ ಇದೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಳಿಕ ಪ್ರಗತಿಪರ ಚಿಂತಕರು, ಹೋರಾಟಗಾರರಿಗೆ ರಕ್ಷಣೆ ನೀಡುವ ಬಗ್ಗೆ ಸರ್ಕಾರ ಭರವಸೆ ನೀಡಿರುವುದರಿಂದ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿರುವುದಾಗಿ ಚೇತನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಹಿಂದೆ ದಿಡ್ಡಳ್ಳಿ ನಿರಾಶ್ರಿತರ ಪರ ಹೋರಾಟ ನಡೆಸಿದ್ದ ಚೇತನ್ ಇತ್ತೀಚೆಗೆ ವೀರಶೈವ ಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದರು.
Comments