ಹಸಿರ ಸಿರಿಯಲ್ಲಿ ಚಿತ್ರೀಕರಣ ನಡೆಸುತ್ತಿರುವ ದಿ ವಿಲನ್ ಚಿತ್ರ ತಂಡ



ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟಿಸುತ್ತಿರುವ ದಿ ವಿಲನ್ ಚಿತ್ರತಂಡ ಹಸಿರ ಸಿರಿ ಚಿಕ್ಕಮಂಗಳೂರಿನಲ್ಲಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಈಗಾಗಲೇ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು, ಸಖತ್ ಸೌಂಡ್ ಮಾಡುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ ಗಿರಿ, ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಸ್ಯಾಂಡಲ್ ವುಡ್ ಭಾರೀ ನಿರೀಕ್ಷೆಯ ಚಿತ್ರ 'ದಿ ವಿಲನ್' ಚಿತ್ರೀಕರಣ ನಡೆದಿದೆ.ಸುದೀಪ್, ಆಮಿ ಜಾಕ್ಸನ್ ಪಾಲ್ಗೊಂಡಿದ್ದ ದೃಶ್ಯಗಳ ಚಿತ್ರೀಕರಣ ನಡೆಸಲಾಗಿದೆ. ಸಾಹಸ ನಿರ್ದೇಶಕ ರವಿವರ್ಮ ಸಾರಥ್ಯದಲ್ಲಿ ಫೈಟಿಂಗ್ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳಲಾಗಿದೆ. ಫೈಟಿಂಗ್ ದೃಶ್ಯಗಳಿಗಾಗಿ ಬಂದಿದ್ದ ನಿರ್ದೇಶಕ ಪ್ರೇಮ್, ಹಸಿರ ಸಿರಿಯ ಪ್ರಕೃತಿ ಸೌಂದರ್ಯಕ್ಕೆ ಮಾರುಹೋಗಿ ಹಾಡಿನ ಚಿತ್ರೀಕರಣವನ್ನು ನಡೆಸಿದ್ದಾರೆ. ಈಗಾಗಲೇ ವಿವಿಧೆಡೆ ಚಿತ್ರೀಕರಣ ನಡೆದಿದ್ದು, ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ಭರದಿಂದ ಸಾಗಿದ್ದು, ಸುದೀಪ್ ಪತ್ನಿ ಸಹ ಭೇಟಿ ನೀಡಿದ್ದು ವಿಶೇಷವಾಗಿತ್ತು.
Comments