ನಟಿ ರಮ್ಯಾ ಬಗೆಗೆ ಸ್ಯಾಂಡಲ್ ವುಡ್ ನಲ್ಲಿ ಹರಿದಾಡ್ತಿರೋ ಸುದ್ದಿ ಏನು ?

ನಾಗಶೇಖರ್ ನಿರ್ದೇಶನದ 'ಸಂಜು ವೆಡ್ಸ್ ಗೀತಾ' ಚಿತ್ರದಲ್ಲಿ ಅಭಿನಯಿಸಿದ್ದ ರಮ್ಯಾ ಮತ್ತೆ ಅವರ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಗಶೇಖರ್ ನಿರ್ಮಿಸಲಿರುವ ಎಸ್. ಮಹೇಂದರ್ ನಿರ್ದೇಶನದ ಸಿನಿಮಾದಲ್ಲಿ ರಮ್ಯಾ ಅವರು ಅಭಿನಯಿಸಲಿದ್ದಾರೆ ಎಂಬ ಮಾತುಗಳು ಗಾಂಧಿನಗರದ ತುಂಬಾ ಹರಿದಾಡ್ತಿದೆ .
ಸ್ಯಾಂಡಲ್ ವುಡ್ ನಲ್ಲಿ ಅಂತೆ ಕಂತೆ ಸುದ್ದಿಗಳಿಗೆ ಕಡಿಮೆ ಏನು ಇಲ್ಲ. ರಾಜಕಾರಣದಲ್ಲಿ ಬ್ಯುಸಿಯಾಗಿರುವ ನಟಿ ರಮ್ಯಾ ಮತ್ತೆ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡ್ತಿದೆ. ಈಗ ಎಸ್. ಮಹೇಂದರ್ ನಿರ್ದೇಶನ, ನಾಗಶೇಖರ್ ನಿರ್ಮಾಣದಲ್ಲಿ ಮೂಡಿ ಬರಲಿರುವ 'ಮಹೇಂದರ್ ಮನಸಲ್ಲಿ ಮುಮ್ತಾಜ್' ಹೆಸರಿನ ಚಿತ್ರದಲ್ಲಿ ರಮ್ಯಾ ಅಭಿನಯಿಸಲಿದ್ದಾರೆ ಎನ್ನಲಾಗಿದೆ. ರಾಜಕೀಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರಮ್ಯಾ ಮತ್ತೆ ಸಿನಿಮಾದಲ್ಲಿ ಅಭಿನಯಿಸ್ತಾರಾ ಕಾದು ನೋಡಬೇಕಿದೆ.
Comments