ನಟಿ ರಮ್ಯಾ ಮತ್ತೆ ಸ್ಯಾಂಡಲ್ ವುಡ್ ಗೆ ಎಂಟ್ರೀ..!!

ಸ್ಯಾಂಡಲ್ ವುಡ್ ನಲ್ಲಿ ಅಂತೆ ಕಂತೆ ಸುದ್ದಿಗಳಿಗೆ ಭರವೇನೂ ಇಲ್ಲ. ರಾಜಕಾರಣದಲ್ಲಿ ಬ್ಯುಸಿಯಾಗಿರುವ ನಟಿ ರಮ್ಯಾ ಮತ್ತೆ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡ್ತಿದೆ.
ನಾಗಶೇಖರ್ ನಿರ್ದೇಶನದ 'ಸಂಜು ವೆಡ್ಸ್ ಗೀತಾ' ಚಿತ್ರದಲ್ಲಿ ಅಭಿನಯಿಸಿದ್ದ ರಮ್ಯಾ ಮತ್ತೆ ಅವರ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಗಶೇಖರ್ ನಿರ್ಮಿಸಲಿರುವ ಎಸ್. ಮಹೇಂದರ್ ನಿರ್ದೇಶನದ ಸಿನಿಮಾದಲ್ಲಿ ರಮ್ಯಾ ಅವರು ಅಭಿನಯಿಸಲಿದ್ದಾರೆ.
ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿದ್ದಾರೆ. ಹಿಂದೆ ಗಣೇಶ್ ಅವರೊಂದಿಗೆ 'ಬೊಂಬಾಟ್' ಚಿತ್ರದಲ್ಲಿ ರಮ್ಯಾ ಅಭಿನಯಿಸಿದ್ದರು.ಈಗ ಎಸ್. ಮಹೇಂದರ್ ನಿರ್ದೇಶನ, ನಾಗಶೇಖರ್ ನಿರ್ಮಾಣದಲ್ಲಿ ಮೂಡಿ ಬರಲಿರುವ 'ಮಹೇಂದರ್ ಮನಸಲ್ಲಿ ಮುಮ್ತಾಜ್' ಹೆಸರಿನ ಚಿತ್ರದಲ್ಲಿ ರಮ್ಯಾ ಅಭಿನಯಿಸಲಿದ್ದಾರೆ ಎನ್ನಲಾಗಿದೆ.
Comments