ಕನ್ನಡದ ನಟಿ ತೆಲುಗಿಗೆ ಪಾದಾರ್ಪಣೆ ಮಾಡಲಿದ್ದಾರೆ

ಇತ್ತೀಚೆಗಷ್ಟೇ ಕಿರಿಕ್ ಪಾರ್ಟಿ ಚಿತ್ರದ ರಶ್ಮಿಕಾ ಮಂದಣ್ಣ, ಶ್ರದ್ಧಾ ಶ್ರೀನಾಥ್ ಮತ್ತು ಸಂಯುಕ್ತ ಟಾಲಿವುಡ್ ಗೆ ಎಂಟ್ರಿಕೊಟ್ಟು ಯಶಸ್ಸು ಗಳಿಸಿದ್ದಾರೆ. ಇದೀಗ ಇದೇ ಸಾಲಿಗೆ ಕನ್ನಡದ ನಟಿ ಶ್ರುತಿ ಹರಿಹರನ್ ತೆಲುಗಿನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ. ಕನ್ನಡ, ಮಲಯಾಳಂ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿರುವ ಶ್ರುತಿ ಹರಿಹರನ್ ಇದೀಗ ತೆಲುಗಿನ ಚಿತ್ರದಲ್ಲೂ ನಟಿಸಲಿದ್ದಾರೆ.
ಬೇರೆ ಭಾಷೆ ಚಿತ್ರದಲ್ಲಿ ಅಭಿನಯಿಸುವುದು ಹೊಸದೊಂದು ಅನುಭವ ನೀಡುತ್ತದೆ ಎಂದು ಶ್ರುತಿ ಹರಿಹರನ್ ಹೇಳಿದ್ದಾರೆ. ಸದ್ಯ ಚಿತ್ರದ ಕುರಿತು ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. 2018ರ ಜನವರಿಯಲ್ಲಿ ಚಿತ್ರದ ಕುರಿತು ಮಾಹಿತಿ ಹೊರ ಬೀಳಲಿದೆ. ಶ್ರುತಿ ಹರಿಹರನ್ ಅಭಿನಯಿಸಿದ್ದ 'ತಾರಕ್' ಮತ್ತು 'ಉಪೇಂದ್ರ ಮತ್ತೆ ಬಾ' ಚಿತ್ರಗಳು ತೆರೆಕಂಡಿದ್ದವು. ಇನ್ನು ವಿಜಯ್ ಪ್ರಸಾದ್ ನಿರ್ದೇಶನದ 'ಲೇಡಿಸ್ ಟೈಲರ್' ನಂತಹ ವಿಭಿನ್ನ ಚಿತ್ರಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ.
Comments