ಬೆಂಗಳೂರಿಗೆ ಬರಲ್ಲ ಎಂದ ಸನ್ನಿ ಲಿಯೋನ್
ನಗರದ ಟೆಕ್ ಪಾರ್ಕ್ ನಲ್ಲಿ ನಡೆಯಬೇಕಿದ್ದ ಸನ್ನಿನೈಟ್ಸ್ ಕಾರ್ಯಕ್ರಮದಲ್ಲಿ ತಾವು ಪಾಲ್ಗೊಳ್ಳುವುದಿಲ್ಲ ಎಂದು ನಟಿ ಸನ್ನಿ ಲಿಯೋನ್ ಹೇಳಿಕೊಂಡಿದ್ದಾರೆ.
ಬೆಂಗಳೂರು ನಗರ ಪೊಲೀಸರು ನನಗೆ ಹಾಗೂ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ನಮ್ಮ ತಂಡವು ಜನರ ರಕ್ಷಣೆಗೆ ಮೊದಲ ಆದ್ಯತೆ ಕೊಡುತ್ತದೆ ಹೀಗಾಗಿ ನಾನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಟ್ವೀಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.ಹೊಸ ವರ್ಷಾಚರಣೆಯಂದು ಟೈಮ್ಸ್ ಕ್ರಿಯೇಷನ ಸಂಸ್ಥೆಯು ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸನ್ನಿ ನೈಟ್ಸ್ ಕಾರ್ಯಕ್ರಮವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದರು.
Comments