ರಾಜಕಾರಣಕ್ಕೆ ಎಂಟ್ರಿ ಕೊಟ್ಟ ರಜನಿ ಬಗ್ಗೆ ಅಕ್ಷಯ್ ಹೇಳಿದ್ದೇನು ಗೊತ್ತಾ..!!
ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ ಸ್ಥಾಪಿಸಿ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು, ಅವರಿಗೆ ಅಪಾರ ಬೆಂಬಲ ವ್ಯಕ್ತವಾಗಿದೆ. ಅನೇಕ ದಿಗ್ಗಜರು ಶುಭ ಹಾರೈಸಿದ್ದಾರೆ. ರಜನಿಕಾಂತ್ ಅವರೊಂದಿಗೆ '2.O' ಚಿತ್ರದಲ್ಲಿ ಅಭಿನಯಿಸಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು, ರಾಜಕಾರಣಿಯಾಗಿ ರಜನಿಕಾಂತ್ ಉತ್ತಮ ಕೆಲಸ ಮಾಡಬಲ್ಲರು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
67 ವರ್ಷದ ರಜನಿಕಾಂತ್ ಡಿಸೆಂಬರ್ 31 ರಂದು ಹೊಸ ರಾಜಕೀಯ ಪಕ್ಷ ಘೋಷಿಸಿದ್ದು, ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.ಅವರು ರಾಜಕೀಯಕ್ಕೆ ಬರುತ್ತಿರುವುದು ಒಳ್ಳೆಯ ನಿರ್ಧಾರವಾಗಿದೆ. ರಾಜಕೀಯದಲ್ಲಿ ಅವರು ಉತ್ತಮವಾದ ಪಾತ್ರವನ್ನು ನಿರ್ವಹಿಸಬಲ್ಲರು ಎಂಬುದನ್ನು ಖಚಿತವಾಗಿ ಹೇಳುತ್ತೇನೆ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.
Comments