ಪವರ್ ಸ್ಟಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ಅಂಜನಿಪುತ್ರ' ಕಣ್ತುಂಬಿಕೊಂಡ ಅಭಿಮಾನಿಗಳಿಗೆ ಅವರ ಮುಂದಿನ ಚಿತ್ರ ಯಾವುದು ಎಂಬ ಕುತೂಹಲ ಸಹಜವಾಗಿತ್ತು. ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿಯಾದ ಸುದ್ದಿ ಇಲ್ಲಿದೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಈ ವರ್ಷ ಪುನೀತ್ ಅಭಿಮಾನಿಗಳಿಗೆ ಹಬ್ಬ ಗ್ಯಾರಂಟಿ.
ಶಶಾಂಕ್ ನಿರ್ದೇಶನದ ಚಿತ್ರದಲ್ಲಿ ಅವರು ಅಭಿನಯಿಸಲಿದ್ದಾರೆ. 'ರಾಜಕುಮಾರ' ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿ ಬರಲಿದೆ. ಇದರೊಂದಿಗೆ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದಲ್ಲಿ ಅಪ್ಪು ಕಾಣಿಸಿಕೊಳ್ಳಲಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಲಿರುವ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶಿಸಲಿದ್ದಾರೆ. ಫೆಬ್ರವರಿ ಅಂತ್ಯಕ್ಕೆ ಇಲ್ಲವೇ ಮಾರ್ಚ್ ಆರಂಭದಲ್ಲಿ ಚಿತ್ರ ಆರಂಭವಾಗಲಿದೆ ಎನ್ನಲಾಗಿದೆ.
Comments