ಟಗರು ಚಿತ್ರ ಬಿಡುಗಡೆಗೂ ಮುನ್ನವೇ ಥಿಯೇಟರ್ ಮುಂದೆ ಶಿವಣ್ಣನ ಕಟೌಟ್

ಕನ್ನಡ ಸಿನಿಮಾ ಪ್ರೇಕ್ಷಕರಲ್ಲಿ ಭಾರಿ ಕೌತುಕವನ್ನ ಹುಟ್ಟುಹಾಕಿರುವ ಹ್ಯಾಟ್ರಿಕ್ ಹೀರೋ ಅಭಿನಯದ ಟಗರು ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ. ದಿನದಿಂದ ದಿನಕ್ಕೆ ಚಿತ್ರದ ಬಗ್ಗೆ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ.
ಬಿಡುಗಡೆ ಆಗಿರುವ ಟೀಸರ್ ಮತ್ತು ಹಾಡುಗಳು ಈಗಾಗಲೇ ಹಿಟ್ ಆಗಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಟಗರು ಸಿನಿಮಾ ಬಿಡುಗಡೆಗೆ ಮುನ್ನವೇ ಟಗರು2 ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ.ಇವೆಲ್ಲವುದರ ಮಧ್ಯೆ ಸಿನಿಮಾ ಬಿಡುಗಡೆ ದಿನಾಂಕ ನಿಗಧಿಯಾಗುವ ಮುನ್ನವೇ ಚಿತ್ರಮಂದಿರಗಳ ಮುಂದೆ ಸಂಭ್ರಮಾಚರಣೆ ಶುರುವಾಗಿದೆ. ಹೇಗಿದೆ ಟಗರು ಸಿನಿಮಾ ಕ್ರೇಜ್? ಎಷ್ಟು ಥಿಯೇಟರ್ ಗಳಲ್ಲಿ ಚಿತ್ರ ಬಿಡುಗಡೆ ಆಗುವ ಸಾಧ್ಯತೆಗಳಿವೆ? ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ದುನಿಯಾ ಸೂರಿ ಕಾಂಬಿನೇಶನ್ ನಲ್ಲಿ ಬಿಡುಗಡೆ ಆಗಲಿರುವ ಟಗರು ಸಿನಿಮಾಗೆ ನಿರೀಕ್ಷೆಗಳು ಹೆಚ್ಚಾಗಿದೆ. ಕನ್ನಡ ಸಿನಿಮಾರಂಗದಲ್ಲಿ ಮಾತ್ರವಲ್ಲದೆ ಪರಭಾಷೆಯ ಚಿತ್ರರಂಗದಲ್ಲೂ ಟಗರು ಸಿನಿಮಾಗೆ ಭಾರಿ ಬೇಡಿಕೆ ಬಂದಿದೆ.
Comments