16 ವರ್ಷದ ಬಳಿಕ ಒಂದಾಗಲಿದೆ ಈ ಮೆಜ್ಜೆಸ್ಟಿಕ್ ಜೋಡಿ..?

15 Feb 2018 1:22 PM | Entertainment
360 Report

ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಲು ಅವಕಾಶ ಕೊಟ್ಟ ಮೆಜೆಸ್ಟಿಕ್ ಚಿತ್ರತಂಡವನ್ನ ಇಂದಿಗೂ ದರ್ಶನ್ ತುಂಬಾ ಗೌರವ ಪ್ರೀತಿಯಿಂದಲೇ ನೋಡಿಕೊಳ್ಳುತ್ತಾರೆ. ಇತ್ತೀಚಿಗಷ್ಟೇ ಸಿನಿಮಾತಂಡದ ಜೊತೆ ಸೇರಿ ಚಿತ್ರದಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಏರ್ಪಡಿಸಿದ್ದರು.

 ದರ್ಶನ್ ರವರು ಮೆಜೆಸ್ಟಿಕ್ ಸಿನಿಮಾ ನಿರ್ಮಾಪಕರಾದ ರಾಮಮೂರ್ತಿ ಒಟ್ಟಿಗೆ ಸೇರಿ ಮತ್ತೊಂದು ಸಿನಿಮಾ ಮಾಡುವುದಾಗಿ ನಿರ್ಧರಿಸಿದ್ದು ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬದಂದು ಚಿತ್ರದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತಂತೆ. ರಾಮಮೂರ್ತಿ ನಿರ್ಮಾಣದ ಚಿತ್ರದಲ್ಲಿ ದರ್ಶನ್ ಅಭಿನಯಿಸುವುದು ಖಚಿತವಾಗಿದೆ. ಆದರೆ ಸಿನಿಮಾ ನಿರ್ದೇಶನ ಮಾಡುವುದು ಯಾರು ಎನ್ನುವುದನ್ನ ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಚಿತ್ರಕ್ಕೆ 'ಡಿ ಕಂಪನಿ' ಎನ್ನುವ ಶೀರ್ಷಿಕೆ ಇಡುವ ಸಾಧ್ಯತೆಗಳಿದೆ. ಈಗಾಗಲೇ ಅಭಿಮಾನಿಗಳು ಚಿತ್ರದ ಪೋಸ್ಟರ್ ಗಳನ್ನ ಡಿಸೈನ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ.

Edited By

Shruthi G

Reported By

Madhu shree

Comments