ಅಭಿಮಾನಿಗಳ ಕನಸು ನನಸು ಮಾಡಿದ ಅಭಿನಯ ಚಕ್ರವರ್ತಿ

ಸೋಷಿಯಲ್ ಮೀಡಿಯಾಗಳಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಕಿಚ್ಚ ಸುದೀಪ್ ಅವರು ಹುಟ್ಟುಹಬ್ಬಕ್ಕೆ ಶುಭ ಕೋರಬೇಕೆಂದುಕೊಂಡಿದ್ದ ಅಭಿಮಾನಿಗಳಿಗೆ ಈ ಬಾರಿ ನಿರಾಸೆಯುಂಟು ಮಾಡಿದ್ದರು ಆದರೆ ಅಭಿಮಾನಿಗಳು ಕಿಚ್ಚ ಸುದೀಪ್ ರವರನ್ನು ಭೇಟಿ ಮಾಡಲು ಕಾತುರದಿಂದ ಕಾಯುತ್ತಿದ್ದರು ಅವರ ಕನಸು ನನಸು ಮಾಡಿದ ಅಭಿನಯಚಕ್ರವರ್ತಿ.
ಸುದೀಪ್ ಹುಟ್ಟುಹಬ್ಬದ ಆಚರಣೆಯಿಂದ ದೂರ ಉಳಿದು, ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುವಂತೆ ತಿಳಿಸಿದ್ದರು. ಅದರಂತೆ ಅವರ ಅಭಿಮಾನಿಗಳು ವಿವಿಧ ಸೇವಾಕಾರ್ಯಗಳ ಮೂಲಕ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಿದ್ದರು. ಹುಟ್ಟುಹಬ್ಬದ ಹೊರತಾಗಿ ಅವರನ್ನು ಭೇಟಿ ಮಾಡಲು ಕಾತರರಾಗಿದ್ದ ಅಭಿಮಾನಿಗಳಿಗೆ ಅಖಿಲ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೇನಾ ಸಮಿತಿ ಸುದೀಪ್ ಭೇಟಿ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರರಂಗದಲ್ಲಿ 22 ವರ್ಷ ಪೂರ್ಣಗೊಳಿಸಿದ ಸುದೀಪ್ ಅವರನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಗಿದೆ. ಅಭಿಮಾನಿಗಳ ಭೇಟಿ ಕಾರ್ಯಕ್ರಮದಲ್ಲಿ ಅಪಾರ ಅಭಿಮಾನಿಗಳು ಭಾಗವಹಿಸಿ ಸುದೀಪ್ ಅವರೊಂದಿಗೆ ಫೋಟೋ, ಸೆಲ್ಫಿ ತೆಗೆಸಿಕೊಂಡು, ಸಂಭ್ರಮಿಸಿದ್ದಾರೆ. ನೆಚ್ಚಿನ ನಟನಿಗೆ ಶುಭಾಶಯ ಹೇಳಿದ್ದಾರೆ. ಅಭಿಮಾನಿಗಳ ಜೊತೆ ಸಮಯ ಕಳೆದ ಕಿಚ್ಚ ಕೂಡ ಖುಷಿಯಾಗಿದ್ದಾರೆ.
Comments