ಅಣ್ಣಾವ್ರ ಫ್ಯಾಮಿಲಿಯಿಂದ ಚಿತ್ರ ರಂಗಕ್ಕೆ ಎಂಟ್ರಿ ಕೊಡ್ತಿರೋ ಆರಡಿ ಕಟೌಟ್



ಅಣ್ಣವ್ರ ಕುಟುಂಬದಿಂದ ಚಿತ್ರರಂಗಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ನಟನೆ ಮಾತ್ರವಲ್ಲದೆ ಸಿನಿಮಾ ನಿರ್ಮಾಣ, ಸಮಾಜ ಸೇವೆಗಳಲ್ಲಿ ಎತ್ತಿದ ಕೈ.ಶಿವರಾಜ್ ಕುಮಾರ್ , ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಈ ಮೂವರು ಸಹೋದರರು ಸ್ಯಾಂಡಲ್ ವುಡ್ ನ ಸ್ಟಾರ್ ನಟರಾಗಿದ್ದಾರೆ. ಇತ್ತೀಚಿಗೆ ವಿನಯ್ ರಾಜ್ ಕುಮಾರ್ ಸಹ ಕನ್ನಡ ಚಿತ್ರ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಈಗ ರಾಮ್ ಕುಮಾರ್ ಮಗ ಧೀರೇನ್ ರಾಮ್ ಕುಮಾರ್ ಸಿನಿಮಾರಂಗಕ್ಕೆ ಎಂಟ್ರಿಕೊಡಲು ಸಿದ್ದತೆ ಮಾಡಿಕೊಂಡಿದ್ದಾರೆ. ಈಗಾಗಲೇ ಕಥೆಗಳನ್ನೂ ಕೇಳುತ್ತಿದ್ದಾರೆ ಚಿತ್ರರಂಗದ ಸ್ಟಾರ್ ನಿರ್ಮಾಪಕರು ರಾಜ್ ಮೊಮ್ಮಗನನ್ನ ಪರಿಚಯಿಸಲು ಮುಂದಾಗಿದ್ದಾರೆ. ಈ ಎಲ್ಲಾ ಕ್ವಾಲಿಟಿ ಇರುವ ರಾಜ್ ಕುಮಾರ್ ಅವರ ಸೋದರ ಅಳಿಯ ಚಿತ್ರರಂಗಕ್ಕೆ ಬರಲು ಸಜ್ಜಾಗಿದ್ದಾನೆ. ಪಾರ್ವತಮ್ಮ ರಾಜ್ ಕುಮಾರ್ ಅವರ ಸಹೋದರ ಎಸ್ ಎ ಶ್ರೀನಿವಾಸ್ ಅವರ ಪುತ್ರ ಸೂರಜ್ ಕುಮಾರ್ ಹೀರೋ ಆಗಿ ಚಿತ್ರರಂಗಕ್ಕೆ ಬರುತ್ತಿದ್ದಾರೆ. ನಿನಾಸಂ ನಲ್ಲಿ ಅಭಿನಯದ ತರಬೇತಿ ಪಡೆದುಕೊಂಡಿದ್ದು ಚೆನೈ ನಲ್ಲಿ ಡ್ಯಾನ್ಸ್ ಮತ್ತು ಫೈಟಿಂಗ್ ಟ್ರೈನಿಂಗ್ ಪಡೆದುಕೊಂಡು ಚಿತ್ರ ರಂಗಕ್ಕೆ ಎಂಟ್ರಿ ಕೊಡಲಿದ್ದಾರೆ.
Comments