'ಟಗರು' ಮೆಚ್ಚಿಕೊಂಡ ಗೃಹ ಸಚಿವ ರಾಮಲಿಂಗಾ ರೆಡ್ಡಿ
ಚುನಾವಣೆ ಸಂದರ್ಭದಲ್ಲಿ ರಾಜಕೀಯ ಕಾರ್ಯಕ್ರಮದಲ್ಲಿ ನಿರತರಾಗಿರುವ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಹ್ಯಾಟ್ರಿಕ್ ಹೀರೋ ಶಿವಣ್ಣ ನ ಜೊತೆ ಟಗರು ಸಿನಿಮಾ ವೀಕ್ಷಣೆ ಮಾಡಿದ್ದಾರೆ.
ಡಾ. ಶಿವರಾಜ್ ಕುಮಾರ್ ಅಭಿನಯದ ಟಗರು ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿದ್ದಲ್ಲದೆ, ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಅವರ ಈ ಸಿನಿಮಾವನ್ನು ಗೃಹ ಸಚಿವರು ವೀಕ್ಷಿಸಿದ್ದಾರೆ. ಜೆಪಿ ನಗರದ ಸಿದ್ಧಲಿಂಗೇಶ್ವರ ಚಿತ್ರ ಮಂದಿರದಲ್ಲಿ ಚಿತ್ರದ ನಾಯಕ ಶಿವರಾಜ್ ಕುಮಾರ್ ಮತ್ತು ನಟಿ ಮಾನ್ವಿತಾ ಹರೀಶ್ ಜತೆ ಕುಳಿತು ವೀಕ್ಷಿಸಿದ್ದಾರೆ. ಅಷ್ಟೇ ಅಲ್ಲ, ಚಿತ್ರಕ್ಕೆ ಮೆಚ್ಚುಗೆಯನ್ನೂ ನೀಡಿದ್ದಾರೆ.
Comments