ಶ್ರೀ ಗಳ ಆಶೀರ್ವಾದ ಪಡೆದ ರಾಕಿಂಗ್ ಸ್ಟಾರ್ ..!!
ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ನಟ ರಾಕಿಂಗ್ ಸ್ಟಾರ್ ಯಶ್, ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಯಶ್ ಅಭಿನಯದ 'ಕೆ.ಜಿ.ಎಫ್.' ಚಿತ್ರೀಕರಣ ನಡೆಯುತ್ತಿದ್ದು, ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ. ವಿವಿಧೆಡೆ ಕಾರ್ಯಕ್ರಮಗಳಿಗೂ ಯಶ್ ಹೋಗಿ ಬರುತ್ತಾರೆ.
ಅಂತೆಯೇ ತುಮಕೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಶ್ರೀಗಳು ಇತ್ತೀಚೆಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿದ್ದು, ಎಂದಿನಂತೆಯೇ ಭಕ್ತರಿಗೆ ದರ್ಶನ ನೀಡುತ್ತಾರೆ. ಯಶ್ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶ್ರೀಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಮಠದಿಂದ ಯಶ್ ಅವರನ್ನು ಗೌರವಿಸಲಾಗಿದೆ.
Comments