ವಿದೇಶದಲ್ಲಿ ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಲು ಹೊರಟಿರುವ ರ‍್ಯಾಪರ್ ಚಂದನ್ ಶೆಟ್ಟಿ



ಕನ್ನಡದ ಖ್ಯಾತ ರ‍್ಯಾಪರ್ ಚಂದನ್ ಶೆಟ್ಟಿ ಈವರೆಗೂ ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಲ್ಲಿ ಕನ್ನಡದ ಕಂಪನ್ನು ಪಸರಿಸಿದ್ದರು. ಇದೀಗ ಮೊಟ್ಟ ಮೊದಲ ಬಾರಿಗೆ ಹೊರದೇಶದಲ್ಲಿಯೂ ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಲು ಹೊರಟಿದ್ದಾರೆ.
ಹೌದು, ಬಿಗ್‌ಬಾಸ್ ವೇದಿಕೆಯಲ್ಲಿ ಚಂದನ್ ಶೆಟ್ಟಿ ಒಂದು ಮಾತನ್ನು ಹೇಳಿದ್ರು. ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸುವುದು ನನ್ನ ಗುರಿ. ಅದಕ್ಕಾಗಿ ಅವಿರತವಾಗಿ ಶ್ರಮಿಸುತ್ತೇನೆ ಎಂದು ಅವರು ಹೇಳಿಕೊಂಡಿದ್ದರು. ಇದರ ಮೊದಲ ಹೆಜ್ಜೆಯಾಗಿ ಇದೀಗ ಹೊರ ದೇಶದಲ್ಲಿ ಕಾರ್ಯಕ್ರಮ ಕೊಡುತ್ತಿದ್ದಾರೆ ಕನ್ನಡದ ರ‍್ಯಾಪರ್ ಚಂದನ್ ಶೆಟ್ಟಿ. ಇದೇ ತಿಂಗಳು ಆಸ್ಟ್ರೇಲಿಯಾದಲ್ಲಿ ತಮ್ಮ ಮೊದಲ ಪರ್ಫಾಮನ್ಸ್ ನೀಡಲಿದ್ದಾರೆ ಚಂದನ್. ಮಾ. 16 ರಂದು ಸಿಡ್ನಿ, 17 ರಂದು ಮೆಲ್ಬೊರ್ನ್ ಹಾಗೂ 18 ರಂದು ಅಡಿಲೇಡ್‌ನಲ್ಲಿ ಮೂರು ದಿನಗಳ ಕಾರ್ಯಕ್ರಮ ನೀಡಲಿದ್ದಾರೆ ಚಂದನ್. ಇದು ಚಂದನ್ ಶೆಟ್ಟಿಯ ಪ್ರಥಮ ವಿದೇಶಿ ಕಾರ್ಯಕ್ರಮ. ಸಹಜವಾಗಿಯೇ ಇದು ಚಂದನ್ ಖುಷಿಯನ್ನು ದುಪ್ಪಟ್ಟುಗೊಳಿಸಿದೆ. ತಮ್ಮ ಸಂತಸವನ್ನು ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.
Comments