ಇಂದು ರಾಜ್ಯಾದ್ಯಂತ ಚಿತ್ರ ಪ್ರದರ್ಶನ ಬಂದ್..!

ಡಿಜಿಟಲ್ ಸೇವೆ ಪೂರೈಕೆದಾರರು ಮತ್ತು ಕನ್ನಡ ಚಲನಚಿತ್ರ ನಿರ್ಮಾಪಕರ ನಡುವೆ ಉಂಟಾಗಿದ್ದ ಬಿಕ್ಕಟ್ಟು ತಾರಕಕ್ಕೇರಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಯುಎಫ್‌ಒ ಮತ್ತು ಕ್ಯೂಬ್ ಸಂಸ್ಥೆಗಳು ಹೆಚ್ಚಿನ ದರ ನಿಗದಿ ಮಾಡಿರುವುದನ್ನು ವಿರೋಧಿಸಿ ಇಂದು ಯಾವುದೇ ಸಿನಿಮಾ ಪ್ರದರ್ಶಿಸದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೀರ್ಮಾನಿಸಿದೆ.
ಈಗಿರುವ ದರದಲ್ಲಿ ಶೇ.25 ರಷ್ಟು ಕಡಿಮೆ ಮಾಡುವಂತೆ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಬೇಡಿಕೆ ಸಲ್ಲಿಸಿತ್ತು. ಇದಕ್ಕೊಪ್ಪದ ಡಿಜಿಟಲ್ ಸೇವೆ ಪೂರೈಕೆದಾರರು, ಕೇವಲ ಶೇ.9ದರ ಕಡಿಮೆ ಮಾಡುವುದಾಗಿ ತಿಳಿಸಿದ್ದರು. ಇದನ್ನು ವಿರೋಧಿಸಿ ಮಾ.2ರಿಂದ ಯಾವುದೇ ಹೊಸ ಸಿನಿಮಾ ಬಿಡುಗಡೆ ಮಾಡದಂತೆ ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರ ನಿರ್ಮಾಪಕರು ತೀರ್ಮಾನಕ್ಕೆ ಬಂದಿದ್ದರು. ಕೊನೆಗೂ ಸಮಸ್ಯೆ ಬಗೆಹರಿಯದ ಕಾರಣ ಈ ಶುಕ್ರವಾರವೂ ಕನ್ನಡ ಸೇರಿದಂತೆ ಸಕ್ಷಿಣ ಭಾರತದ ಯಾವುದೇ ಹೊಸ ಚಿತ್ರಗಳು ತೆರೆಕಾಣುತ್ತಿಲ್ಲ. ಈಗಾಗಲೇ ತೆರೆಕಂಡಿರುವ ಟಗರ, ಪ್ರೀತಿಯ ರಾಯಭಾರಿ, ಪ್ರೇಮಬರಹ ಸಿನಿಮಾಕ್ಕೂ ಬಂದ್ ಬಿಸಿ ತಟ್ಟಿದೆ.
Comments