ದಚ್ಚು ಅಭಿನಯದ 'ಯಜಮಾನ' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಕಳೆದ ಫೆಬ್ರವರಿ 18ರಂದು ಚಿತ್ರೀಕರಣ ಪ್ರಾರಂಭಗೊಂಡಿದ್ದು ಮಾರ್ಚ್ 10ಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಎರಡನೇ ಹಂತದ ಚಿತ್ರೀಕರಣ ಯುಗಾದಿ ಹಬ್ಬದ ನಂತರ ನಡೆಯಲಿದೆ.
ಮೈಸೂರಿನಲ್ಲಿ ಹಾಕಲಾಗಿದ್ದ ಬೃಹತ್ ಸೆಟ್ ನಲ್ಲಿ ಮೂರು ವಾರಗಳ ಕಾಲ ಚಿತ್ರೀಕರಣ ನಡೆಯಿತು. ಚಿತ್ರೀಕರಣದಲ್ಲಿ ದರ್ಶನ್, ರಶ್ಮಿಕಾ ಮಂದಣ್ಣ, ತನ್ಯಾ ಹೋಪ್, ಧನಂಜಯ್, ಠಾಕೂರ್ ಅನೂಪ್ ಸಿಂಗ್, ದೇವರಾಜ್ ಸೇರಿದಂತೆ ಹಲವು ಕಲಾವಿದರು ಭಾಗವಹಿಸಿದ್ದರು. ಶೈಲಜಾ ನಾಗ್ ಮತ್ತು ಬಿ ಸುರೇಶ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು ಕನ್ನಡದ ಬ್ಲಾಕ್ ಬಸ್ಟರ್ ವಿಷ್ಣುವರ್ದನ ಚಿತ್ರವನ್ನು ನಿರ್ದೇಶಿಸಿದ್ದ ಪಿ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಯಾಜಮಾನ ಚಿತ್ರಕ್ಕೆ ಚೇತನ್ ಕುಮಾರ್ ಸಂಭಾಷಣೆ ಬರೆಯುತ್ತಿದ್ದು ವಿ ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಸುರೇಶ್ ಕುಡುವಾಲಿ ಅವರ ಛಾಯಾಗ್ರಹಣವಿದೆ.
Comments