ಕನ್ನಡದ ರಜನಿಕಾಂತ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಆ ನಟ ಯಾರು ಗೊತ್ತಾ..?



ಇತ್ತೀಚಿನ ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿದ ನವರಸ ನಾಯಕ ಜಗ್ಗೇಶ್ ಕನ್ನಡ ಕಲಾವಿದರ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಅದರಲ್ಲೂ ಚಾಲೆಂಜಿಂಗ್ ಸ್ಟಾರ್ 'ದರ್ಶನ್ ಕನ್ನಡದ ರಜನಿಕಾಂತ್' ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಈಗ ಡಿ ಬಾಸ್ ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ.
ರಜನಿಕಾಂತ್ ಭಾರತ ಚಿತ್ರರಂಗದ ಸೂಪರ್ ಸ್ಟಾರ್. ಅಪಾರ ಅಭಿಮಾನಿಗಳನ್ನ ಹೊಂದಿರುವ ನಟ. ಈ ನಟನಿಗೆ ಕನ್ನಡದ ನವರಸ ನಾಯಕ ಜಗ್ಗೇಶ್ ಕೂಡ ಅಭಿಮಾನಿ ಎಂಬುದು ಗಮನಿಸಬೇಕು. ರಜನಿಕಾಂತ್ ಅವರ ಬಗ್ಗೆ ಅಪಾರ ಅಭಿಮಾನಿ ಹೊಂದಿರುವ ಜಗ್ಗೇಶ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನ ರಜನಿಕಾಂತ್ ಗೆ ಹೋಲಿಸಿದ್ದಾರೆ. ದರ್ಶನ್ ಒಂದು ರೀತಿಯಲ್ಲಿ ನನ್ನ ಕ್ಯಾರೆಕ್ಟರ್. ನಾನಾದ್ರು ಸ್ವಲ್ಪ ನೇರ ನುಡಿ ಅಂದು ಬಿಡುತ್ತೇನೆ. ಆದ್ರೆ, ಅವನು ಯಾರಿಗೂ ಏನೂ ಅನ್ನಲ್ಲ. ಒಬ್ಬನೇ ನೋವು ತಿಂತಾನೆ ಒಳಗೆ ಇಟ್ಕೊಂಡು. ನನ್ನ ಪ್ರಕಾರ ಅವನು ಒಪನ್ ಅಪ್ ಆದ್ರೆ, ಅವನು ಕನ್ನಡದ ರಜನಿಕಾಂತ್'' ಎಂದು ಜಗ್ಗೇಶ್ ಅವರು ಹೇಳಿದ್ದಾರೆ. 'ಕರೆಕ್ಟ್ ಆಗಿ ದರ್ಶನ್ ನ ಹಾಕ್ಕೊಂಡು ಸಿನಿಮಾ ಮಾಡಿದ್ರೆ, ಕನ್ನಡದಲ್ಲಿ ಸಲ್ಮಾನ್ ಖಾನ್ ರೇಂಜ್ ಗೆ, 100 ಕೋಟಿ ಕ್ಲಬ್ ಗೆ ದರ್ಶನ್ ಹೋಗ್ತಾರೆ'' ಎಂದು ಹೆಮ್ಮೆಯಿಂದ ಹೇಳಿದ್ದಾರೆ. ಜಗ್ಗೇಶ್ ಅವರ ಈ ಮಾತುಗಳು ಕನ್ನಡ ನಟರಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಶಕ್ತಿ ತುಂಬಿದಂತಾಗಿದೆ.
Comments