ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇಲ್ಲಿದೆ ಗುಡ್ ನ್ಯೂಸ್
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಕೆ.ಜಿ.ಎಫ್ ಸಿನಿಮಾ ಶುರುವಾಗಿ 1 ವರ್ಷ ಆಯ್ತು ಆದರೆ ಇನ್ನೂ ಕೂಡ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್ ಆಗಿಲ್ಲ. ಚಿತ್ರೀಕರಣ ಇನ್ನೇನು ಮುಗಿಯಲಿದೆ ಅನ್ನುವಷ್ಟರಲ್ಲಿ ಕಾರಣಾಂತರಗಳಿಂದ ಚಿತ್ರೀಕರಣಕ್ಕೆ ಬ್ರೇಕ್ ಕೊಡಲಾಗಿತ್ತು. ಇದೀಗ ಕೆ ಜಿ ಎಫ್ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಶುರುವಾಗಿದೆ ಎನ್ನುವುದನ್ನ ನಿರ್ಮಾಪಕ ಕಾರ್ತಿಕ್ ಗೌಡ ತಿಳಿಸಿದ್ದಾರೆ.
ಹೌದು, ಕೊನೆಯ ಹಂತದ ಚಿತ್ರೀಕರಣದಲ್ಲಿ ಸಾಹಸ ದೃಶ್ಯಗಳನ್ನ ಚಿತ್ರೀಕರಿಸುತ್ತಿದ್ದು ಅದಕ್ಕಾಗಿ ಸಾಹಸ ನಿರ್ದೇಶಕರಾದ 'ಅಂಬು-ಅರಿವು' ಬೆಂಗಳೂರಿಗೆ ಬಂದಿದ್ದಾರೆ. ರಾಕಿಂಗ್ ಸ್ಟಾರ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Comments