ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ..!!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಚಿತ್ರಗಳನ್ನು ಕಣ್ತುಂಬಿಕೊಳ್ಳಲು ಕಾಯುತ್ತಿರುವ ಅಭಿಮಾನಿಗಳಿಗೆ ಇಲ್ಲಿದೆ ಸಿಹಿ ಸುದ್ದಿ . ಏನು ಅಂತೀರಾ...ಹಾಗಾದ್ರೆ ಮುಂದೆ ಓದಿ....
ದರ್ಶನ್ ಅಭಿನಯದ 'ಕುರುಕ್ಷೇತ್ರ' ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಡಬ್ಬಿಂಗ್ ಕೆಲಸಗಳು ನಡೆದಿವೆ. ಇದೇ ವೇಳೆ 'ಯಜಮಾನ' ಚಿತ್ರೀಕರಣ ಕೂಡ ನಡೆಯುತ್ತಿದೆ. ಇದಾದ ಬಳಿಕ ದರ್ಶನ್, ಸಂದೇಶ್ ನಾಗರಾಜ್ ನಿರ್ಮಾಣದ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ನಂತರದಲ್ಲಿ ಉಮಾಪತಿ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಚಿತ್ರದಲ್ಲಿ ದರ್ಶನ್ ಅಭಿನಯಿಸಲಿದ್ದಾರೆ. ಮುನಿರತ್ನ ನಿರ್ಮಾಣ, ನಾಗಣ್ಣ ನಿರ್ದೇಶನದಲ್ಲಿ 'ಕುರುಕ್ಷೇತ್ರ' ಮೂಡಿ ಬಂದಿದ್ದು, ಚಿತ್ರವನ್ನು ವೀಕ್ಷಿಸಲು ಅಭಿಮಾನಿಗಳು, ಸಿನಿರಸಿಕರು ಕಾತರರಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಶೀಘ್ರವೇ ಚಿತ್ರ ತೆರೆಗೆ ಬರಲಿದೆ.
Comments