ಕೃಷ್ಣಮೃಗ ಬೇಟೆ ಪ್ರಕರಣ : ನಟ ಸಲ್ಮಾನ್ ಖಾನ್‌ಗೆ ಐದು ವರ್ಷ ಜೈಲು ಶಿಕ್ಷೆ

20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣ ತೀರ್ಪನ್ನು ರಾಜಸ್ತಾನದ ಜೋಧ್ಪುರ ನ್ಯಾಯಾಲಯದ ಪ್ರಕಟಿಸಿದ್ದು, ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ತೀರ್ಪು ನೀಡಿ, 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.
1998 ರಲ್ಲಿ 'ಹಮ್ ಸಾಥ್ ಸಾಥ್ ಹೇ' ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ನಡೆದಿದ್ದ ಬೇಟೆ ಪ್ರಕರಅ ಇದಾಗಿದ್ದು, ಸಲ್ಮಾನ್ ಮಾತ್ರವೇ ಅಲ್ಲದೇ, ಸೈಫ್ ಅಲಿ ಖಾನ್, ಟಬು, ಸೋನಾಲಿ ಬೇಂದ್ರೆ, ನೀಲಂ ಕೂಡ ಆರೋಪಿಗಳಾಗಿದ್ದಾರೆ. ಎಲ್ಲಾ ಆರೋಪಿಗಳು ಇಂದು ಜೋಧ್ಪುರ ನ್ಯಾಯಾಲಯಕ್ಕೆ ಹಾಜರಾಗಿದ್ದು, ಇದರಂತೆ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು, ಇತರೆ ಆರೋಪಿಗಳನ್ನು ಖುಲಾಸೆಗೊಳಿಸಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೆಕ್ಷನ್ 51ರ ಅಡಿ ಸಲ್ಮಾನ್ ಖಾನ್ ಅವರನ್ನು ಮುಖ್ಯ ನ್ಯಾಯಮೂರ್ತಿ ದೇವ್ ಕುಮಾರ್ ಖಾತ್ರಿ ಅವರು ದೋಷಿ ಎಂದು ತೀರ್ಪು ನೀಡಿದ್ದು, 5 ವರ್ಷ ಜೈಲು ಶಿಕ್ಷೆ ಹಾಗೂ ರೂ.10,000 ದಂಡ ವಿಧಿಸಿದೆ. ಅಲ್ಲದೆ, ನಟ ಸೈಫ್ ಅಲಿ ಖಾನ್, ನಟಿ ಟಬು, ನೀಲಮ್ ಮತ್ತು ಸೋನಾಲಿ ಬೇಂದ್ರೆ ಅವರನ್ನು ಖುಲಾಸೆಗೊಳಿಸಿದ್ದು, ಈ ಮೂಲಕ ನಟ-ನಟಿಯರಿಗೆ ಬಿಗ್ ರಿಲೀಫ್ ದೊರೆತಂತಾಗಿದೆ.
Comments