ಸಪ್ತಪದಿ ತುಳಿದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಹೆಸರು ಮಾಡಿದ್ದ ಕಲಾವಿದೆ ನಯನಾ ಈಗ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ನಯನಾ ಧರ್ಮಸ್ಥಳದಲ್ಲಿ ಮದುವೆಯನ್ನು ಮಾಡಿಕೊಂಡಿದ್ದಾರೆ.
ಈಗ ಈ ಜೋಡಿ ಸ್ನೇಹಿತರಿಗಾಗಿ ಬೆಂಗಳೂರಿನಲ್ಲಿ ಆರತಕ್ಷತೆಯನ್ನು ಮಾಡಿಕೊಂಡಿದ್ದಾರೆ. ನಯನಾ ಕೈ ಹಿಡಿದಿರುವ ಶರತ್ ಅವರ ಸಂಬಂಧಿಕರಾಗಿದ್ದು ಇಬ್ಬರ ಮನೆಯಲ್ಲಿ ಮಾತಕತೆ ನಡೆಸಿ ಮದುವೆ ಮಾಡಿರುವುದಾಗಿ ತಿಳಿಸಿದ್ದಾರೆ.ಶರತ್ ಬೆಂಗಳೂರಿನಲ್ಲಿ ಉದ್ಯಮಿ ಆಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ಗುರು ಹಿರಿಯರ ಒಪ್ಪಿಗೆ ಮೇರೆಗೆ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಿರುತೆರೆಯ ಅಭಿನಯದ ಮೂಲಕವೇ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಗಳಿಸಿದ್ದ ನಯನಾ ಈಗ ಮದುವೆಯಾಗಿದ್ದಾರೆ. ಕಿರುತೆರೆ ಮಾತ್ರವಲ್ಲದೇ ಬೆಳ್ಳಿತೆರೆಗೂ ಈಗ ತಾನೇ ಪಾದಾರ್ಪಣೆ ಮಾಡಿದ್ದಾರೆ. ಅವರ ನವ ಜೀವನ ಸುಖಮಯವಾಗಿರಲಿ ಎಂದು ಆಶಿಸೋಣ.
Comments