ನೆಗಿಟಿವ್ ರೋಲ್ ನಲ್ಲಿ ಮತ್ತೆ ಎಂಟ್ರಿ ಕೊಟ್ಟ ಬಾಲಿವುಡ್ ನಟ ನಾನಾ ಪಾಟೇಕರ್

ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಸುಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯಿಸುತ್ತಿರುವ ಕನ್ನಡದ 'ಚಿಲ್ಲಂ' ಚಿತ್ರದಲ್ಲಿ ಬಾಲಿವುಡ್ ನ ಸ್ಟಾರ್ ನಟ ನೆಗಿಟಿವ್ ರೋಲ್ ದಲ್ಲಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಮೊದಲು ಕನ್ನಡದ ಖ್ಯಾತ ನಟ ರಾಘವೇಂದ್ರ ರಾಜ್ ಕುಮಾರ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ನಟಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ಬಾಲಿವುಡ್ ನ ನಟ ನಾನಾ ಪಾಟೇಕರ್ ಕೂಡ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಅಭಿನಯಿಸುತ್ತಿರುವುದಾಗಿ ತಿಳಿದುಬಂದಿದೆಯಂತೆ. ಲೂಸ್ ಮಾದ ಯೋಗಿ ಅವರ 'ಯಕ್ಷ' ಸಿನಿಮಾದಲ್ಲಿ ನಟಿಸಿದ ನಾನಾ ಪಾಟೇಕರ್ ಅವರು ಇದೀಗ ಈ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ನಲ್ಲಿ ಬಣ್ಣ ಹಚ್ಚುತ್ತಿದ್ದಾರೆ.
Comments