ಕಿರಿಕ್ ಪಾರ್ಟಿ ಕರ್ಣನಿಂದ ಅಭಿಮಾನಿಗಳಿಗೆ ಸಿಗಲಿದೆ ಬಂಪರ್ ಗಿಫ್ಟ್..!!

ಕಿರಿಕ್ ಪಾರ್ಟಿ' ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಟ್ರೆಂಡ್ ಸೆಟ್ ಮಾಡಿದ ರಕ್ಷಿತ್ ಶೆಟ್ಟಿ ಪರಂವಾ ಸ್ಟುಡಿಯೋ ಮೂಲಕ '777 ಚಾರ್ಲಿ' ಎಂಬ ಮತ್ತೊಂದು ಸಿನಿಮಾ ನಿರ್ಮಿಸುತ್ತಿದ್ದು. ಇದೆ ತಿಂಗಳು ಜೂನ್ 6 ರಂದು ಈ ಚಿತ್ರದ ಮಹೂರ್ತ ನಡೆಯಲಿದೆ.
ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಎರಡು ಬಂಪರ್ ಗಿಫ್ಟ್ ಸಿಗಲಿದೆ . ಜೂನ್ 6 ರಂದು ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ದಿನವಾಗಿರುವುದರಿಂದ ಅದೇ ದಿನ ‘ಅವನೇ ಶ್ರೀಮನ್ನಾರಾಯಣ’ ಹಾಗೂ ‘777 ಚಾರ್ಲಿ’ ಎರಡೂ ಚಿತ್ರಗಳ ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈಗಾಗಲೇ 777 ಚಾರ್ಲಿ ಸಿನಿಮಾದ ಪೋಸ್ಟರ್ ಈಗ ರಿಲೀಸ್ ಆಗಿದೆ. ಇದು ಮನುಷ್ಯ ಹಾಗೂ ಪ್ರಾಣಿಯ ಬಾಂಧವ್ಯದ ಸುತ್ತ ನಡೆಯುವ ಸಿನಿಮವಾಗಿದ್ದು, ಇಡೀ ಚಿತ್ರ ಒಂದು ನಾಯಿ ಹಾಗೂ ಹೀರೋ ಸುತ್ತ ಸುತ್ತುತ್ತದೆಯಂತೆ. ಕಿರಣ್ ರಾಜ್ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಸದ್ಯ, ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Comments