ಕರ್ಣನ ಬರ್ತ್ ಡೇ ದಿನವೇ ಈ ಎರಡು ಚಿತ್ರಗಳ ಫಸ್ಟ್ ಲುಕ್ ಪೋಸ್ಟರ್ ರಿಲೀಜ್..!
ಇಂದು ನಟ ರಕ್ಷಿತ್ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಈ ವಿಶೇಷ ದಿನದಂದು ಚಿತ್ರತಂಡಗಳು ಅವರ ಅಭಿನಯದ 'ಅವನೇ ಶ್ರೀಮನ್ನಾರಾಯಣ' ಹಾಗೂ '777 ಚಾರ್ಲಿ' ಈ ಎರಡು ಚಿತ್ರಗಳ ಫಸ್ಟ್ ಲುಕ್ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಗಿದೆ.
ಇನ್ನು 'ಕಿರಿಕ್ ಪಾರ್ಟಿ' ಗೆಲುವಿನ ನಂತರ ರಕ್ಷಿತ್ ಅವರು 'ಅವನೇ ಶ್ರೀಮನ್ನಾರಾಯಣ' ಹಾಗೂ '777 ಚಾರ್ಲಿ' ಸಿನಿಮಾಗಳಲ್ಲಿ ಬಿಜಿ ಇದ್ದಾರೆ. ನಟ ರಕ್ಷಿತ್ ಶೆಟ್ಟಿಯವರು ಈ ಎರಡೂ ಸಿನಿಮಾಗಳಲ್ಲಿನ ಪೋಸ್ಟರ್ ನಲ್ಲಿ ಒಂದು ಹೊಸತನ ಎದ್ದು ಕಾಣುತ್ತಿದೆ. ಭಿನ್ನ ಜಾತಿಯ ಕಥಾ ವಸ್ತುವಿನ ಮೂಲಕ ಬರುತ್ತಿರುವ ಈ ಸಿನಿಮಾಗಳು ಈಗಾಗಲೇ ಸಾಕಷ್ಟು ಕಲ್ಪನೆ ಹುಟ್ಟಿಸಿವೆ. ಈ ಫಸ್ಟ್ ಲುಕ್ ಪೋಸ್ಟರ್ಗಳು ಎಲ್ಲರ ಗಮನ ಸೆಳೆಯುತ್ತಿದು.
'ಅವನೇಶ್ರೀಮನ್ನಾರಾಯಣ' ಚಿತ್ರದಲ್ಲಿ ರಕ್ಷಿತ್ ಐದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಬ್ಬ ಭ್ರಷ್ಟ ಪೊಲೀಸ್ ಪಾತ್ರದಲ್ಲಿ ರಕ್ಷಿತ್ ಅವರು ಕಾಣಿಸಿಕೊಳ್ಳಲಿದ್ದಾರೆ . ಮೊದಲ ಬಾರಿಗೆ ರಕ್ಷಿತ್ ಶೆಟ್ಟಿ ಜೊತೆಗೆ ಶಾನ್ವಿ ಶ್ರೀವತ್ಸವ್ ಕಾಣಿಸಿಕೊಳ್ಳುತ್ತಿದ್ದಾರೆ. ರಕ್ಷಿತ್ ಶೆಟ್ಟಿ,'ರಂಗಿತರಂಗ' ಖ್ಯಾತಿಯ ನಿರ್ಮಾಪಕರಾದ ಪ್ರಕಾಶ್, ಮತ್ತು ಪುಷ್ಕರ್ ಮಲ್ಲಿಕಾರ್ಜುನಯ್ಯ ಚಿತ್ರಕ್ಕೆ ಬಂಡವಾಳವನ್ನು ಹೂಡಿದ್ದಾರೆ. 'ಕಿರಿಕ್ ಪಾರ್ಟಿ'ಗೆ ಸಂಗೀತ ನೀಡಿದ್ದ ಅಜನೀಶ್ ಲೋಕನಾಥ್ ಅವರೇ ಈ ಚಿತ್ರಕ್ಕೂ ಸಂಗೀತವನ್ನು ನೀಡಲಿದ್ದಾರೆ.
'777 ಚಾರ್ಲಿ' ಸಿನಿಮಾ ಒಂದು ಶ್ವಾನ ಮತ್ತು ಮನುಷ್ಯನ ಅಟ್ಯಾಚ್ಮೆಂಟ್ ಹೇಳುವಂತಹ ಕಥೆಯನ್ನು ಹೊಂದಿದೆ ಎಂದು ಹೇಳಲಾಗಿದೆ. ಚಿತ್ರದಲ್ಲಿ ಶ್ವಾನದ ಹೆಸರು ಚಾರ್ಲಿ ಆಗಿದ್ದು, ಶ್ವಾನದ ಲೈಸನ್ಸ್ ನಂಬರ್ 777 ಅಂತೆ. ಹಾಗಾಗಿ ಚಿತ್ರಕ್ಕೆ '777 ಚಾರ್ಲಿ' ಎಂಬ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಾರಂತೆ. ರಕ್ಷಿತ್ ಶೆಟ್ಟಿ ಜೊತೆ 'ರಿಕ್ಕಿ', 'ಕಿರಿಕ್ ಪಾರ್ಟಿ' ಚಿತ್ರಗಳಿಲ್ಲಿ ಕೆಲಸ ಮಾಡಿರುವ ನಿರ್ದೇಶಕ ಕಿರಣ್ ರಾಜ್ ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್‌ಗೆ ಎಂಟ್ರಿಕೊಡುತ್ತಿದ್ದಾರೆ.
Comments