ಸ್ಯಾಂಡಲ್ ವುಡ್ ಗೆ ರೀ ಎಂಟ್ರಿ ಕೊಡ್ತಾರ ಮೋಹಕ ತಾರೆ..!

ಸ್ಯಾಂಡಲ್ವುಡ್ ನಲ್ಲಿ ಸ್ಯಾಂಡಲ್ ವುಡ್ ಕ್ವೀನ್ ಅಂತಾನೆ ಫೇಮಸ್ ಆಗಿದ್ದ ಮಾಜಿ ಸಂಸದೆ ರಮ್ಯಾ ಮತ್ತೆ ಕನ್ನಡ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುವ ಮನಸ್ಸು ಮಾಡಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಅವರು ಚಿತ್ರರಂಗಕ್ಕೆ ರೀ ಎಂಟ್ರಿ ಆಗುವ ಎಲ್ಲಾ ಸಾಧ್ಯತೆ ಇದೆ ಸ್ವತಹ ಖುದ್ದು ರಮ್ಯಾ ಅವರೇ ಈ ಕುರಿತು ಮಾತನಾಡಿದ್ದಾರೆ.
ರಮ್ಯಾ ಅವರು ಈ ವಿಚಾರವನ್ನು ಸ್ಪಷ್ಟಪಡಿಸಿರುವುದು ಟ್ವೀಟರ್‌ನಲ್ಲಿ. ನಟ ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಟ್ರೇಲರ್ ಅನ್ನು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮೆಚ್ಚಿ ಟ್ವೀಟ್ ಮಾಡಿದ್ದರು. ಆ ಟ್ವೀಟ್‌ಗೆ ಧನ್ಯವಾದ ಸಲ್ಲಿಸುವ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ, 'ನೀವು ಯಾವತ್ತೂ ಸ್ಯಾಂಡಲ್‌ವುಡ್ ಕ್ವೀನ್, ನಿಮ್ಮನ್ನು ಮತ್ತೆ ಬೆಳ್ಳಿ ತೆರೆಯಲ್ಲಿ ನೋಡಲು ಇಚ್ಛಿಸುತ್ತೇನೆ' ಎಂದು ತಿಳಿಸಿದ್ದರು. ರಕ್ಷಿತ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ರಮ್ಯಾ, '2019ರ ನಂತರ' ಎಂದು ತಿಳಿಸಿದ್ದಾರೆ. ಈ ಇಬ್ಬರ ಟ್ವೀಟ್‌ಗಳನ್ನು ಗಮನಿಸಿದ ಟ್ವೀಟರ್ ಜಗತ್ತು ಚಿತ್ರರಂಗಕ್ಕೆ ಸ್ಯಾಂಡಲ್ವುಡ್ ಕ್ವೀನ್ ಮತ್ತೆ ಸಿನಿಮಾಗೆ ಬರುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಸದ್ಯ ಮತ್ತೆ ರಮ್ಯ ಬಣ್ಣದ ಜಗತ್ತಿಗೆ ಎಂಟ್ರಿ ಕೊಡ್ತಾರ ಅನ್ನೋದನ್ನ ಕಾದು ನೋಡಬೇಕಾಗಿದೆ.
Comments