ಅಂಧನ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಶಿವಣ್ಣ..! ಯಾವ ಸಿನಿಮಾ ಗೊತ್ತಾ?

ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಂಧನ ಪಾತ್ರದಲ್ಲಿ ಅಭಿನಯಿಸುತ್ತಿರುವ ಸಿನಿಮಾದ ಚಿತ್ರಿಕರಣ ಭರದಿಂದ ಸಾಗುತ್ತಿದೆ.
‘ಕವಚ’ ಸಿನಿಮಾದಲ್ಲಿ ಶಿವಣ್ಣ ಕುರುಡನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿನ ಶಿವಣ್ಣನ ಲುಕ್ ರಿವಿಲ್ ಆಗಿದೆ. ಸಿನಿಮಾದ ಶೂಟಿಂಗ್ ಊಟಿಯಲ್ಲಿ ನಡೆಯುತ್ತಿದೆ. ಮಲೆಯಾಳಂನ 'ಒಪ್ಪಂ' ಚಿತ್ರದ ರೀಮೇಕ್ ಸಿನಿಮಾವೇ ಈ ಕನ್ನಡದ ಕವಚ ಸಿನಿಮಾ. ಚಿತ್ರದಲ್ಲಿ ಶಿವರಾಜ್‍ಕುಮಾರ್ ಒಬ್ಬ ಅಂಧನ ಪಾತ್ರವನ್ನು ಮಾಡುತ್ತಿದ್ದಾರೆ. ಅಭಿಮಾನಿಗಳಲ್ಲಿ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗಿದೆ. ತೆರೆ ಮೇಲೆ ಈ ಚಿತ್ರ ಯಾವ ರೀತಿ ಮೂಡಿ ಬರುತ್ತದೆ ಅನ್ನೋದನ್ನ ಕಾದು ನೋಡ ಬೇಕಿದೆ..
Comments