'ಲೈಫ್ ಜೊತೆ ಒಂದ್ ಸೆಲ್ಫಿ' ಚಿತ್ರದ ಜೊತೆ ಚಾಲೆಂಜಿಂಗ್ ಸ್ಟಾರ್..!
ದಿನಕರ್ ತೂಗುದೀಪ ನಿರ್ದೇಶನದ ‘ಲೈಫ್ ಜೊತೆ ಒಂದ್ ಸೆಲ್ಫಿ' ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ , ನೆನಪಿರಲಿ ಪ್ರೇಮ್, ಹರಿಪ್ರಿಯಾ ಅಭಿನಯಿಸುತ್ತಿದ್ದಾರೆ. ಸದ್ಯ ಸಿನಿಮಾ ಶೂಟಿಂಗ್ ಮುಗಿಸಿ ಇಂದು ಸಂಜೆ ಟ್ರೇಲರ್ ಮತ್ತು ಹಾಡುಗಳನ್ನ ಬಿಡುಗಡೆ ಮಾಡಲು ಚಿತ್ರತಂಡ ರೆಡಿಯಾಗಿದೆ.
'ಲೈಫ್ ಜೊತೆ ಒಂದ್ ಸೆಲ್ಫಿ' ಚಿತ್ರದ ಆಡಿಯೋ ಮತ್ತು ಟ್ರೇಲರ್ ಅನ್ನು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಲಿದ್ದಾರೆ. ಈ ಹಿಂದೆ 'ಲೈಫ್ ಜೊತೆ ಒಂದ್ ಸೆಲ್ಫಿ' ಚಿತ್ರದ ಶೂಟಿಂಗ್ ವೇಳೆ ಸೆಟ್ ಗೂ ಕೂಡ ದರ್ಶನ್ ಭೇಟಿ ಕೊಟ್ಟಿದ್ದರು. ಇಂದು ಸಂಜೆ ನಡೆಯುವ ಆಡಿಯೋ ಮತ್ತು ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ದರ್ಶನ್ ಜೊತೆಯಲ್ಲಿ ಸದ್ಯ ಸ್ಯಾಂಡಲ್ ವುಡ್ ಕೃಷ್ಣನಾಗಿರುವ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ತುಂಬಾ ದಿನಗಳ ನಂತರ ದಿನಕರ್ ತೂಗುದೀಪ್ ನಿರ್ದೇಶನ ಮಾಡುತ್ತಿರುವ ಸಿನಿಮಾವು ಇದಾಗಿದೆ. ವಿಭಿನ್ನ ಕಥಾಹಂದರವನ್ನು ಹೊಂದಿರುವ ಈ ಚಿತ್ರದಲ್ಲಿ ಸುಧಾರಾಣಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಸಿನಿಮಾದಲ್ಲಿನ ವಿಶೇಷ ಎನ್ನುತ್ತಿದೆ ಚಿತ್ರತಂಡ. ಈ ಸಿನಿಮಾ ತೆರೆ ಮೇಲೆ ಯಾವ ರೀತಿ ಮೂಡಿ ಬರುತ್ತದೆ ಅನ್ನೋದನ್ನ ಕಾದು ನೋಡಬೇಕಿದೆ.
Comments