ಡಿ-ಬಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಕುರುಕ್ಷೇತ್ರ ಚಿತ್ರತಂಡ

ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ 'ಕುರುಕ್ಷೇತ್ರ' ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಶೇಕಡ ಹತ್ತರಷ್ಟು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಾಕಿ ಇದೆ.ಆ ಕೆಲಸ ಪೂರ್ಣಗೊಂಡ ಬಳಿಕ ಚಿತ್ರ ತೆರೆಮೇಲೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.
ಕುರುಕ್ಷೇತ್ರ ಚಿತ್ರದಲ್ಲಿ ಮುನಿರತ್ನ ನಿರ್ಮಾಣ ಹಾಗೂ ವಿ. ಹರಿಕೃಷ್ಣ ಸಂಗೀತ ನಿರ್ದೇಶಿಸಿದ್ದು, ನಾಗೇಂದ್ರ ಪ್ರಸಾದ್ ಸಾಹಿತ್ಯವನ್ನು ಬರೆದಿದ್ದಾರೆ. ಶೀಘ್ರದಲ್ಲೇ ಚಿತ್ರದ ಆಡಿಯೋವನ್ನು ಅದ್ದೂರಿ ಸಮಾರಂಭದಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ದುರ್ಯೋಧನನ ಪಾತ್ರ ನಿರ್ವಹಿಸಿದ್ದು, ಅರ್ಜುನ್ ಸರ್ಜಾ (ಕರ್ಣ), ರವಿಚಂದ್ರನ್ (ಶ್ರೀಕೃಷ್ಣ), ಅಂಬರೀಶ್ (ಭೀಷ್ಮ), ಸೋನು ಸೂದ್ (ಅರ್ಜುನ), ನಿಖಿಲ್ ಕುಮಾರ್ (ಅಭಿಮನ್ಯು), ಮೇಘನಾ ರಾಜ್ (ಭಾನುಮತಿ), ಸ್ನೇಹಾ (ದ್ರೌಪದಿ) ಸೇರಿದಂತೆ ಇನ್ನೂ ಹಲವರು ನಟಿಸುತ್ತಿದ್ದಾರೆ.
Comments