‘ದಿ ವಿಲನ್’ ಚಿತ್ರದ ಶೂಟಿಂಗ್ ಕಂಪ್ಲೀಟ್ ಮಾಡಿದ ಶಿವಣ್ಣ
ಕಿಚ್ಚ ಸುದೀಪ್ ಹಾಗೂ ಶಿವರಾಜ್ ಕುಮಾರ್ ಮೊದಲ ಬಾರಿಗೆ ಒಟ್ಟಿಗೆ ಅಭಿನಯ ಮಾಡುತ್ತಿರುವಂತಹ 'ದಿ ವಿಲನ್' ಸಿನಿಮಾದ ಚಿತ್ರೀಕರಣ ಮುಗಿದಿದೆ. ಸಿನಿಮಾ ಸಂಪೂರ್ಣವಾಗಿಯೇನು ಮುಗಿದಿಲ್ಲ. ಹ್ಯಾಟ್ರಿಕ್ ಹೀರೋ ಶಿವಣ್ಣ ಮಾತ್ರ ತಮ್ಮ ಪಾಲಿನ ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿದ್ದಾರೆ.
ನಿನ್ನೆಯಷ್ಟೇ ಶಿವಣ್ಣ ಶೂಟಿಂಗ್ ಮುಗಿಸಿರುವ ಖುಷಿಯನ್ನು ಸಿನಿಮಾ ತಂಡ ಹಂಚಿಕೊಂಡಿದೆ.ಸಂಪೂರ್ಣ ತಂಡದ ಜೊತೆಯಲ್ಲಿಯೇ ಫೋಟೋ ತೆಗೆಯುವ ಮೂಲಕ 'ದಿ ವಿಲನ್' ಚಿತ್ರತಂಡ ಹ್ಯಾಟ್ರಿಕ್ ಹೀರೋಗೆ ಬಿಳ್ಕೊಡುಗೆ ನೀಡಿದ್ದಾರೆ.ಜೋಗಿ ಪ್ರೇಮ್ ನಿರ್ದೇಶನದ ಸಿನಿಮಾ 'ದಿ ವಿಲನ್'. ಸಿ ಆರ್ ಮನೋಹರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆಮಿ ಜಾಕ್ಸನ್ ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದು ಗಿರಿ ಗೌಡ ಕ್ಯಾಮೆರಾ ವರ್ಕ್ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ತೆರೆ ಮೇಲೆ ಯಾವ ರೀತಿ ಮೋಡಿ ಮಾಡುತ್ತದೆ ಅನ್ನೋದನ್ನ ಕಾದು ನೋಡಬೇಕಿದೆ.
Comments