ಹುಟ್ಟು ಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್

ಗೋಲ್ಡನ್ ಸ್ಟಾರ್ ಗಣೇಶ್ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹುಟ್ಟು ಹಬ್ಬದ ಸಂಭ್ರಮಕ್ಕಾಗಿಯೇ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಗಣೇಶ್ ಮನೆ ಮುಂದೆ ಅಭಿಮಾನಿಗಳು ಬಂದಿದ್ದರು.
ಅಭಿಮಾನಿಗಳ ಸಮ್ಮುಖದಲ್ಲಿಯೇ ಗೋಲ್ಡನ್ ಸ್ಟಾರ್ ಗಣೇಶ್ ತನ್ನ ಪತ್ನಿ ಶಿಲ್ಪಾ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದರು. ತಮ್ಮದೇ ಆದ ಹೋಂ ಬ್ಯಾನರ್‍ನಲ್ಲಿ ನಿರ್ಮಾಣವಾಗುತ್ತಿರುವ ಗೀತಾ ಸಿನಿಮಾವೇ ಗಿಫ್ಟ್ ಎಂದಿದ್ದಾರೆ ಶಿಲ್ಪಾ ಗಣೇಶ್. ಬರ್ತ್ ಡೇ ದಿನವಂದೆ ಆರೆಂಜ್ ಚಿತ್ರದ ಟೀಸರ್ ಅನ್ನು ರಿಲೀಸ್ ಮಾಡಲಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಈಗಾಗಲೇ ‘ಗೀತಾ’ ಸಿನಿಮಾದಲ್ಲಿ ನಟಿಸಲು ಎಲ್ಲ ರೀತಿಯ ತಯಾರಿಯನ್ನು ಮಾಡಿಕೊಂಡಿದ್ದಾರೆ. ಮನೆಯ ಮುಂದೆ ದೊಡ್ಡ ಕಟೌಟ್ ನಿಲ್ಲಿಸಲಾಗಿದೆ. ಇದೇ ಮೊದಲ ಬಾರಿಗೆ ಸಿನಿಮಾ ಸೆಟ್ಟೇರುವ ಮೊದಲೇ ನಟರೊಬ್ಬರ ಕಟೌಟ್ ನಿಲ್ಲಿಸಿ ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಿಸಿದ್ದಾರೆ..
Comments