ಪವರ್ ಸ್ಟಾರ್ ಅಭಿಮಾನಿಗಳಿಗೆ ಸಿಹಿಸುದ್ದಿ..!

17 Jul 2018 6:04 PM | Entertainment
351 Report

ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರದ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಇದರಿಂದ  ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಪುನೀತ್ ರಾಜ್‍ಕುಮಾರ್ ನಟನೆಯ ನಟಸಾರ್ವಭೌಮ ಬಿಡುಗಡೆ ದಿನಾಂಕ  ಫಿಕ್ಸ್ ಆಗಿದ್ದು, ಈ ಅಕ್ಟೋಬರ್ ನಲ್ಲಿ ಸಿನಿಮಾ ತೆರೆ ಕಾಣಲಿದೆ ಎಂದಿದ್ದಾರೆ. ಅಕ್ಟೋಬರ್ 5ರಂದು  ದಸರಾ ಹಬ್ಬದ ಪ್ರಯುಕ್ತ ‘ನಟಸಾರ್ವಭೌಮ’ ಚಿತ್ರವು ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ರಾಕ್‍ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದು, ಡಿಂಪಲ್ ಕ್ವೀನ್ ರಚಿತಾ ರಾಮ್ ಪುನೀತ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಈ ಸಿನಿಮಾ ಶೇ.50ರಷ್ಟು ಚಿತ್ರೀಕರಣ ಮುಗಿದಿದೆ.

Edited By

Manjula M

Reported By

Manjula M

Comments