ವಾಸು ನಾನ್ ಪಕ್ಕಾ ಕಮರ್ಷಿಯಲ್ ಚಿತ್ರದ ಪ್ರಚಾರಕ್ಕೆ ಚಾಲೆಂಜಿಂಗ್ ಸ್ಟಾರ್..!

'ವಾಸು ನಾನ್ ಪಕ್ಕಾ ಕಮರ್ಷಿಯಲ್ ' ಸಿನಿಮಾ ಮೂಲಕ ಅನಿಶ್ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಈ ಸಾಹಸಕ್ಕೆ ಬೆನ್ನು ತಟ್ಟಿ ಬೆಂಬಲವಾಗಿ ನಿಂತಿರುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್. ಜುಲೈ 21ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ.
ಈ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಉದ್ಘಾಟನೆ ಮಾಡಲಿದ್ದಾರೆ. 'ದರ್ಶನ್’ ಅವರು ನಮ್ಮ ಸಿನಿಮಾ ಪ್ರಚಾರಕ್ಕೆ ಬರುತ್ತಿದ್ದಾರೆ ಎಂದ ಮೇಲೆ ನಮಗೆ ಆನೆ ಬಲ ಬಂದಂತೆ. ಹೀಗಾಗಿ ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದಿದೆ ಚಿತ್ರತಂಡ. ಅಜಿತ್‌ವಾಸನ್ ಉಗ್ಗಿನ ಈ ಚಿತ್ರದ ನಿರ್ದೇಶಕರಾಗಿದ್ದು, ಅಜನೀಶ್ ಬಿ ಲೋಕನಾಥ್ ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ.
Comments