'ನಾಗರಹಾವು' ವೀಕ್ಷಿಸಿದ ಹ್ಯಾಟ್ರಿಕ್ ಹೀರೋ ಶಿವಣ್ಣ ಸಿನಿಮಾ ಬಗ್ಗೆ ಹೇಳಿದ್ದೇನು..?

ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಸ್ಯಾಂಡಲ್ ವುಡ್ ನಲ್ಲಿ ಬ್ರೇಕ್ ಕೊಟ್ಟಂತಹ ಸಿನಿಮಾ ಅಂದರೆ ಅದು ದಿವಂಗತ ಪುಟ್ಟಣ್ಣ ಕಣಗಾಲ್ ನಿರ್ದೇಶನ ಮಾಡಿದ 'ನಾಗರಹಾವು' ಸಿನಿಮಾ… ಈ ಚಲನಚಿತ್ರ ದಶಕಗಳ ಬಳಿಕ ಹೊಸ ರೂಪದಲ್ಲಿ ಮತ್ತೊಮ್ಮೆ ಬಿಡುಗಡೆಯಾಗಿದೆ.
ರಿ ರೀಲಿಜ್ ಆದ ಈ ಚಿತ್ರಕ್ಕೆ ಅಭಿಮಾನಿಗಳಿಂದ ಅಪಾರವಾದ ಮೆಚ್ಚುಗೆ ವ್ಯಕ್ತವಾಗುತ್ತಿದೆ, ಬಿಡುಗಡೆಯಾದ ಥಿಯೇಟರ್’ಗಳಲ್ಲಿ ಭರ್ಜರಿ ಪ್ರದರ್ಶನವನ್ನು ಕಾಣುತ್ತಿದೆ. ರವಿಚಂದ್ರನ್ ಅವರ ಸಹೋದರನಾದ ಬಾಲಾಜಿ ಹೊಸ ತಂತ್ರಜ್ಞಾನದೊಂದಿಗೆ ಈ ಚಿತ್ರವನ್ನು ಮತ್ತೆ ತೆರೆ ಮೇಲೆ ತಂದಿದ್ದಾರೆ. ಹಾಗೂ ಅವರ ಈ ಪ್ರಯತ್ನಕ್ಕೆ ಎಲ್ಲರಿಂದಲೂ ಕೂಡ ಮೆಚ್ಚುಗೆ ವ್ಯಕ್ತವಾಗಿದೆ. ಭಾನುವಾರದಂದು ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಾಗರಹಾವು ಚಿತ್ರವನ್ನು ನರ್ತಕಿ ಚಿತ್ರಮಂದಿರದಲ್ಲಿ ನೋಡಿದರು.. ಹೊಸ ತಂತ್ರಜ್ಞಾನದೊಂದಿಗೆ ರಿ ರೀಲಿಜ್ ಆಗಿರುವ ಈ ಚಿತ್ರ ವೀಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದು ಶಿವಣ್ಣ ತಿಳಿಸಿದರು.
Comments