ನಿಖಿಲ್ ಅಭಿನಯದ 'ಸೀತರಾಮ ಕಲ್ಯಾಣ' ಚಿತ್ರದ ಟೀಸರ್ ಬಿಡುಗಡೆಗೆ ಸಿದ್ದವಾಯ್ತು ಭರ್ಜರಿ ವೇದಿಕೆ



ರೇಷ್ಮೆ ನಗರಿ ರಾಮನಗರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅಭಿನಯದ 'ಸೀತರಾಮ ಕಲ್ಯಾಣ' ಚಿತ್ರದ ಟೀಸರ್ ಇಂದು ಬಿಡುಗಡೆ ಮಾಡಲಾಗುತ್ತಿದೆ.
ರಾಮನಗರದ ಇತಿಹಾಸ ಪ್ರಸಿದ್ಧ ಚಾಮುಂಡೇಶ್ವರಿ ದೇವರ ಕರಗ ಉತ್ಸವದ ಪ್ರಯುಕ್ತ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಕರ್ಮಭೂಮಿ ರಾಮನಗರದಲ್ಲೇ ತಮ್ಮ ಪುತ್ರ ಅಭಿನಯಿಸಿರುವ 'ಸೀತರಾಮ ಕಲ್ಯಾಣ' ಚಿತ್ರದ ಟೀಸರ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಜಿಲ್ಲಾ ಕ್ರೀಡಾಂಗಣದಲ್ಲಿ ಭವ್ಯ ವೇದಿಕೆ ಸಿದ್ಧಪಡಿಸಲಾಗಿದ್ದು. ಸುಮಾರು 30 ಸಾವಿರ ಆಸನದ ವ್ಯವಸ್ಥೆ ಕೂಡ ಮಾಡಲಾಗಿದೆ. ಇಂದು ರಾತ್ರಿ 8 ಗಂಟೆಗೆ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರರಂಗದ ಹಲವು ನಟ ನಟಿಯರು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಖ್ಯಾತ ಸಂಗೀತ ನಿದೇರ್ಶಕ ಅರ್ಜುನ್ ಜನ್ಯ ಅವರ ತಂಡದಿಂದ ಲೈವ್ ಮ್ಯೂಸಿಕಲ್ ರಸ ಸಂಜೆ ಕಾರ್ಯಕ್ರಮ ಕೂಡ ಏರ್ಪಡಿಸಲಾಗಿದೆ.
Comments