ಸಿಎಂ ಎಚ್’ಡಿಕೆ ಜೊತೆ ಶಿವಣ್ಣ ದಂಪತಿ ಚರ್ಚೆ..! ಲೋಕಸಭಾ ಉಪ ಚುನಾವಣೆ ಸ್ಪರ್ಧೆ ಬಗ್ಗೆ ಶಿವಣ್ಣ ಹೇಳಿದ್ದು ಹೀಗೆ..!

05 Aug 2018 11:15 AM | Entertainment
8080 Report

ಖ್ಯಾತ ನಟ ಹ್ಯಾಟ್ರಿಕ್ ಹೀರೊ ಡಾ.ಶಿವರಾಜ್ ಕುಮಾರ್ ಅವರು ಸಿಎಂ  ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು. ಹಲವು ವಿಚಾರಗಳ ಕುರಿತು ಶಿವಣ್ಣ ಅವರು ಚರ್ಚೆ ನಡೆಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಜೊತೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಸುಮಾರು ಅರ್ಧ ಗಂಟೆಗಳ ಕಾಲ ಶಿವಣ್ಣ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದರು. ಮೈಸೂರಿನಲ್ಲಿ ದಿ.ಪಾರ್ವತಮ್ಮ ರಾಜ್ ಕುಮಾರ್ ಅವರು ನಡೆಸುತ್ತಿದ್ದ ಶಾಂತಿಧಾಮದ ಅಭಿವೃದ್ಧಿ ಮತ್ತು ಶಾಲೆಯೊಂದನ್ನು ತೆರೆಯುವ ಬಗ್ಗೆ ಶಿವರಾಜ್ ಕುಮಾರ್ ಅವರು ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಕುಮಾರಸ್ವಾಮಿ ಅವರ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಿವರಾಜ್ ಕುಮಾರ್ ಅವರು, 'ಲೋಕಸಭೆ ಉಪ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೀತಾ ಅವರನ್ನು ಕಣಕ್ಕಿಳಿಸುವ ಕುರಿತು ತೀರ್ಮಾನ ಮಾಡಿಲ್ಲ' ಎಂದರು. 'ಗೀತಾ ಅವರು ಸ್ಪರ್ಧಿಸಬೇಕು, ಗೆಲುವು ಸಾಧಿಸಬೇಕು ಎಂಬುದು ದೇವರ ಇಚ್ಛೆ ಇದ್ದರೆ ಯಾರೂ ತಪ್ಪಿಸಲಾಗುವುದಿಲ್ಲ' ಎಂದರು. 'ಶಿವಮೊಗ್ಗದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಯಾವುದೇ ನಿರ್ಧಾರ ಮಾಡಿಲ್ಲ' ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದರು. ಮಧು ಬಂಗಾರಪ್ಪ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಕುರಿತು ಮಾತನಾಡಿದ ಗೀತಾ ಶಿವರಾಜ್ ಕುಮಾರ್, 'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ನಿರ್ಧಾರವನ್ನು ತೆಗೆದುಕೊಂಡರೂ ಸ್ವಾಗತ' ಎಂದು ತಿಳಿಸಿದರು.

 

Edited By

Shruthi G

Reported By

Shruthi G

Comments