ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್ :ಅಂತೂ ಇಂತೂ ಕುರುಕ್ಷೇತ್ರ ಚಿತ್ರದ ಆಡಿಯೋ ರಿಲೀಸ್ ಡೇಟ್ ಫಿಕ್ಸ್ ಆಯ್ತು

ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರವಾದ ಕುರುಕ್ಷೇತ್ರ ಚಿತ್ರ ತಂಡದಿಂದ ಗುಡ್ ನ್ಯೂಸ್ ಹೊರಬಂದಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾವಾದ ಕುರುಕ್ಷೇತ್ರ ಆಡಿಯೋ ಲಾಂಚ್ ಡೇಟ್ ಫಿಕ್ಸ್ ಆಗಿದೆ.
ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಕುರುಕ್ಷೇತ್ರ ಸಿನಿಮಾದ ಆಡಿಯೋ ಆ.27 ಕ್ಕೆ ಲಾಂಚ್ ಮಾಡಲು ಎಲ್ಲಾ ರೀತಿಯ ಸಿದ್ದತೆಗಳು ನಡೆದಿವೆ. ನಾಲ್ಕು ಹಾಡುಗಳ ಜೊತೆಗೆ 12 ಶ್ಲೋಕಗಳಿರೋ ಕುರುಕ್ಷೇತ್ರ ಸಿನಿಮಾಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ. ಡಾ.ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯವನ್ನು ಬರೆದಿದ್ದಾರೆ. ನಾಗಣ್ಣ ಆಕ್ಷನ್ ಕಟ್ ಹೇಳಿರೋ ಈ ಸಿನಿಮಾದಲ್ಲಿ ಅತ್ಯಂತ ದೊಡ್ಡ ತಾರಾ ಬಳಗವೇ ಇದೆ..
Comments