ಬಹು ನಿರೀಕ್ಷಿತ 'ಕುರುಕ್ಷೇತ್ರ' ಆಡಿಯೋ ಬಿಡುಗಡೆಗೆ ಡೇಟ್ ಪಿಕ್ಸ್

ಸ್ಯಾಂಡಲ್’ವುಡ್ ನಲ್ಲಿ ಬಹು ನಿರೀಕ್ಷಿತ ಚಿತ್ರ ಅಂದ್ರೆ ಅದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ..ಇದೀಗ ಚಿತ್ರತಂಡ ಆಡಿಯೋ ಬಿಡುಗಡೆಯ ದಿನಾಂಕವನ್ನು ತಿಳಿಸಿದೆ.
ಕನ್ನಡದ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು ಈ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮವು ಆ.27 ರಂದು ನಡೆಯಲಿದೆ, ಈ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದ್ದು ,ಸಿನಿಮಾಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜನೆಯನ್ನು ಮಾಡಿದ್ದಾರೆ. ಸಾಹಿತ್ಯವನ್ನು ಡಾ.ವಿ. ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. ನಾಗಣ್ಣ ಆ್ಯಕ್ಷನ್ ಕಟ್ ಹೇಳಿದ್ದಾರೆ..ಈ ಚಿತ್ರವನ್ನು ಸಿನಿ ರಸಿಕರು ಬಹಳಷ್ಟು ಕಾತುರದಿಂದ ಕಾಯುತ್ತಿದ್ದು ಇರುವಂತಹ ಕುತೂಕಲವನ್ನು ಮತ್ತಷ್ಟು ಹೆಚ್ಚಿಸಿದೆ.
Comments